ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 5 ಕೆ.ಜಿ ಚಿನ್ನ ವಶ Kurnool
ಕರ್ನೂಲ್ : ಹೈದರಾಬಾದ್ ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕರ್ನೂಲ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹೈದರಾಬಾದ್‍ನಿಂದ ಬೆಂಗಳೂರು ಕಡೆ ಹೊರಟಿದ್ದ ಖಾಸಗಿ ಟ್ರಾವೆಲ್ಸ್‍ನ ಬಸ್ ನಲ್ಲಿ ಚಿನ್ನವನ್ನು ಸಾಗಿಸಲಾಗುತ್ತಿತ್ತು. ಇದರ ಮಾಹಿತಿ ಮೇರೆಗೆ ಗುರುವಾರ ರಾತ್ರಿ 2 ಗಂಟೆ ಸುಮಾರು ಕರ್ನೂಲ್ ಸ್ಪೆಷಲ್ ಎನ್ಫೋರ್ಸ್ಮೆಂಟ್ ಪೊಲೀಸರು ಬಸ್ ನಿಲ್ಲಿಸಿ ತನಿಖೆ ಕೈಗೊಂಡಿದ್ದರು. ಈ ವೇಳೆ ಪ್ರಯಾಣಿಕರಲ್ಲಿ ಒಬ್ಬರಾದ ಬೆಂಗಳೂರಿನ ಶಿವಾಜಿನಗರ ನಿವಾಸಿ ಮಹಾವೀರ್ ಜೈನ್ ಬಳಿ 5 ಕೆ.ಜಿ ಚಿನ್ನ ಇರುವುದನ್ನು ಗಮನಿಸಿದ್ದಾರೆ.
ಈ ವೇಳೆ ಪೊಲೀಸರು ಚಿನ್ನಕ್ಕೆ ಸಂಬಂಧಿಸಿದ ದಾಖಲೆ ತೋರಿಸುವಂತೆ ಕೇಳಿದ್ದಾರೆ. ಆಗ ಮಹಾವೀರ್ ಜೈನ್ ಯಾವುದೇ ದಾಖಲಾತಿ ಪತ್ರ ತೋರಿಸದ ಕಾರಣ ಸುಮಾರು 2.50 ಕೋಟಿ ರೂಪಾಯಿ ಮೌಲ್ಯದ ಬಂಗಾರವನ್ನು ವಶಕ್ಕೆ ಪಡೆದಿದ್ದಾರೆ.
ವಶಕ್ಕೆ ಪಡೆದ ಬಂಗಾರವನ್ನು ಪೊಲೀಸರು ಪ್ರಕರಣ ದಾಖಲಿಸಿ ಆದಾಯ ತೆರಿಗೆ ಇಲಾಖೆಗೆ ಒಪ್ಪಿಸಿದ್ದಾರೆ.