ಪ್ರವಾಹದಿಂದ ಸೂರು ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ basavaraja bommai
ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ಐದು ಲಕ್ಷ ರುಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿಗಳು ಇಂದು ನೆರೆ ವಿಚಾರವಾಗಿ ಅಧಿಕಾರಿಗಳ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಸಾಕಷ್ಟು ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿದ್ದರೂ ನೀರು ತುಂಬಿಕೊಂಡಿದೆ.
ಇದರಿಂದ 466 ಗ್ರಾಮಗಳಲ್ಲಿ ಸಮಸ್ಯೆಯಾಗಿದೆ. ಭಾರಿ ಮಳೆ ಪ್ರವಾಹದಿಂದಾಗಿ ರಾಜ್ಯದಲ್ಲಿ ಈವರೆಗೆ 13 ಜನ ಸಾವನ್ನಪ್ಪಿದ್ದಾರೆ. ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ಮಾಹಿತಿ ನೀಡಿದರು.
ಇದೇ ವೇಳೆ ಸೂರು ಕಳೆದುಕೊಂಡವರಿಗೆ ಪರಿಹಾರ ಘೋಷಿಸಿದ ಬೊಮ್ಮಾಯಿ, ಮಳೆಯಿಂದ ಶೇ.75ರಷ್ಟು ಭಾಗ ಮನೆ ಕಳೆದುಕೊಂಡವರಿಗೆ 5 ಲಕ್ಷ ಹಾಗೂ ಅರ್ಧ ಮನೆ ಕಳೆದುಕೊಂಡವರಿಗೆ 3 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.










