ಸೇತುವೆಯಿಂದ ಸ್ಕಿಡ್ ಆಗಿ ಕಮರಿಗೆ ಬಿದ್ದ ಕಾರು – ಐವರ ಸಾವು
ಜಾರ್ಖಂಡ್ನ ಧನ್ಬಾದ್ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾರು ಸ್ಕಿಡ್ ಆಗಿ ಆಳವಾದ ಕಮರಿಗೆ ಬಿದ್ದು 5 ಜನ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಸ್ವಿಫ್ಟ್ ಡಿಸೈರ್ ಕಾರಿನಲ್ಲಿದ್ದ ಹಸುಗೂಸು, ಇಬ್ಬರು ಮಹಿಳೆಯರು ಸೇರಿದಂತೆ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ, ಅತೀ ವೇಗವಾಗಿ ಕಾರು ಚಲಾಯಿಸುತ್ತಿದ್ದೆ, ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಗಂಟೆಗೆ 200 KM ವೇಗವಾಗಿ ಚಲಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಸೇತುವೆಯಿಂದ ಆಳವಾದ ಕಂದಕಕ್ಕೆ ಬಿಂದಿದೆ. ಕೆಳಗೆ ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ಐವರೂ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಧನ್ ಬಾದ್ ನ ಗೋವಿಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹಗಳನ್ನ ಪೋಸ್ಟ್ ಮಾರ್ಟಮ್ ಗೆ ಕಳುಹಿಸಲಾಗಿದ್ದು, ಮೃತರ ಸಂಬಂಧಿಕರಿಗೆ ವಿಷಯ ತಿಳಿಸಲಾಗಿದೆ.
ಸಹಕಾರಿ ಸಂಘಗಳು ಬ್ಯಾಂಕ್ ಪದ ಬಳಸುವಂತಿಲ್ಲ – RBI ಎಚ್ಚರಿಕೆ
ದೀಪಕ್ ಚಹರ್ ಗೆ ರೋಹಿತ್ ಶರ್ಮಾ ಸೆಲ್ಯೂಟ್ ಮಾಡಿದ್ದೇಕೆ..?