ನವದೆಹಲಿ: 5 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಬಾಲಕಿಯು ಒಬ್ಬಳೇ ಇದ್ದ ಸಂದರ್ಭದಲ್ಲಿ ನೆರೆಮನೆಯ ಅಪ್ರಾಪ್ತ ಬಾಲಕ ಅತ್ಯಾಚಾರ ನಡೆಸಿದ್ದಾನೆ. ಈ ಘಟನೆ ನೈಋತ್ಯ ದೆಹಲಿಯ (New Delhi) ಕಪಶೇರಾ (Kapashera) ಪ್ರದೇಶದಲ್ಲಿ ನಡೆದಿದೆ. ಸಂತ್ರಸ್ತೆಯ ಸಹೋದರನ ಸ್ನೇಹಿತನಾದ 14ರ ಬಾಲಕ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಅಪ್ರಾಪ್ತನನ್ನು ಅಬ್ಸರ್ವೇಶನ್ ಹೋಮ್ ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಯ ಪೋಷಕರು ಕೂಲಿ ಕಾರ್ಮಿಕರಾಗಿದ್ದು, ಸಂತ್ರಸ್ತೆಯನ್ನು ಮನೆಯಲ್ಲೇ ಬಿಟ್ಟು ಕೆಲಸಕ್ಕೆ ತೆರಳಿದ್ದರು. ಈ ವೇಳೆ ನೆರೆಮನೆಯ ಹುಡುಗ ಕೃತ್ಯವೆಸಗಿದ್ದಾನೆ ಎಂದು ಸಂತ್ರಸ್ತೆ ಪೋಷಕರು ಹೇಳಿದ್ದಾರೆ.








