ಕೋವಿಡ್-19 ಕೊರೋನಾ ಕಾಯಿಲೆ ಸಂಕಷ್ಟಕ್ಕೆ ನೆರವಾಗಲು ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆ ಯಿಂದ 50ಲಕ್ಷ ರೂಪಾಯಿಗಳನ್ನು ದೇಣಿಗೆಯಾಗಿ ನೀಡಲಾಗಿದೆ. ವಿಜಯಪುರದಲ್ಲಿಂದು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್‍ರಿಗೆ ಚೆಕ್ ನೀಡಿದರು.ಅಪಾಯಕಾರಿ ಕೊರೋನಾ ಮಾರಣಾಂತಿಕವಾಗಿ ಎಲ್ಲೆಡೆ ಸಾಂಕ್ರಾಮಿಕವಾಗಿ ಹರಡುತ್ತಿದೆ. ಈ ಕಾಯಿಲೆಯಿಂದ ಸಾವಿರಾರು ಜನ ತೊಂದರೆಗಿಡಾಗಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಕಾಯಿಲೆಯನ್ನು ಹತ್ತಿಕ್ಕಲು ಕೆಲಸ ಮಾಡುತ್ತಿವೆ.
ಈ ಹಿನ್ನಲೆಯಲ್ಲಿ ಕೆಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನೆರವಾಗಲು ಬಿ.ಎಲ್.ಡಿ.ಇ ವಿಶ್ವವಿದ್ಯಾಲಯ ವತಿಯಿಂದ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ 25 ಲಕ್ಷ ಹಾಗೂ ರಾಜ್ಯ ಸರ್ಕಾರಕ್ಕೆ ನೆರವಾಗಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 25ಲಕ್ಷ ರೂ.ಗಳನ್ನು ನೀಡಲಾಗಿದೆ.








