ಬೆಂಗಳೂರು: ಕೊರೊನಾ ಸೋಂಕಿನ ವಿರುದ್ಧ ಹೋರಾಟಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಸಹಾಯ ಧನ ಕೋರಿದ್ದಾರೆ. ಹೀಗಾಗಿ ಸಿನಿಮಾ ಸ್ಟಾರ್ ಗಳು, ಉದ್ಯಮಿಗಳು, ರಾಜಕಾರಣಿಗಳು ಸೇರಿದಂತೆ ಮಠಾಧಿಪತಿಗಳು ಕೂಡ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುತ್ತಿದ್ದಾರೆ. ಹೀಗಾಗಿ ಕೊರೊನಾ ವಿರುದ್ಧ ಹೋರಾಟಕ್ಕೆ ಸಿಎಂ ಪರಿಹಾರ ನಿಧಿಗೆ ಕೋಟ್ಯಾಂತರ ರೂಪಾಯಿ ದೇಣಿಗೆ ಹರಿದುಬರುತ್ತಿದೆ.
ಇದೀಗ ಆದಿಚುಂಚನಗಿರಿ ಮಠದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.








