ಬೆಂಗಳೂರು: ಉಗ್ರರ ದಾಳಿ ಸಂದರ್ಭದಲ್ಲಿ ಹುತಾತ್ಮರಾಗಿರುವ ಕ್ಯಾಪ್ಟನ್ ಪ್ರಾಂಜಲ್ (Captain Pranjal) ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 50 ಲಕ್ಷ ರೂ. ಪರಿಹಾರ ವಿತರಿಸಿದೆ.
50 ಲಕ್ಷ ರೂ. ಚೆಕ್ ವಿತರಿಸಿದೆ. ಸರ್ಕಾರ ಘೋಷಿಸಿದಂತೆ ಹುತಾತ್ಮ ಯೋಧ “ಕ್ಯಾಪ್ಟನ್ ಎಂ.ವಿ ಪ್ರಾಂಜಲ್” ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರದ ಚೆಕ್ ಹಸ್ತಾಂತರಿಸಲಾಗಿದೆ. ದೇಶ ಕಾಯುವ ಯೋಧರ ಕುರಿತು ನಮಗೆ ಗೌರವವಿದೆ. ಅಷ್ಟೇ ಗೌರವ, ಕಾಳಜಿ ಅವರ ಕುಟುಂಬದ ಮೇಲೆಯೂ ಇದೆ ಎಂದು ಸಿಎಂ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
ಯೋಧರ ಸಾವು-ನೋವು ಮುಂದಿಟ್ಟು ರಾಜಕಾರಣ ಮಾಡುವವರು ನಾವಲ್ಲ. ರಾಜಕೀಯ ದುರುದ್ದೇಶದಿಂದ ಸುಳ್ಳು ಸುದ್ದಿ ಸೃಷ್ಟಿಸಿ ಅಪಪ್ರಚಾರ ಮಾಡುವದರಲ್ಲಿಯೇ ವಿಕೃತ ಆನಂದ ಪಡುತ್ತಿದ್ದಾರೆ ಕೆಲವರು. ಅಂತಹವರಿಗೆ ದೇವರು ಸದ್ಬುದ್ಧಿ ನೀಡಲಿ ಎಂದು ಹೇಳಿದ್ದಾರೆ.