ಚಂಡೀಗಢ: ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರಾಧ್ಯಾಪಕನ ವಿರುದ್ಧ 500 ವಿದ್ಯಾರ್ಥಿನಿಯರು ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಹಾಗೂ ಹರಿಯಾಣ ಸಿಎಂ ಎಂ.ಎಲ್. ಖಟ್ಟರ್ ಗೆ ಪತ್ರ ಬರೆದಿದ್ದಾರೆ.
ಹರಿಯಾಣದ ಚೌಧರಿ ದೇವಿ ಲಾಲ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕನೊಬ್ಬನ ವಿರುದ್ಧ ಈ ರೀತಿ ಆರೋಪ ಮಾಡಿದ್ದಾರೆ. ನಿವೃತ್ತ ಹೈಕೋರ್ಟ್ (Highcourt) ನ್ಯಾಯಾಧೀಶರ ನೇತೃತ್ವದಲ್ಲಿ ಪತ್ರದ ಪ್ರತಿಗಳನ್ನು ಉಪಕುಲಪತಿ ಡಾ.ಅಜ್ಮೀರ್ ಸಿಂಗ್ ಮಲಿಕ್, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ, ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಸೇರಿದಂತೆ ಹಲವರಿಗೆ ಪತ್ರ ಕಳುಹಿಸಿದ್ದಾರೆ.
ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿದ್ದಾರೆ. ಪ್ರಾಧ್ಯಾಪಕ ಮಹಿಳಾ ವಿದ್ಯಾರ್ಥಿನಿಯರೊಂದಿಗೆ ಅಶ್ಲೀಲ ಪದಗಳನ್ನ ಬಳಸಿ ಮಾತನಾಡುತ್ತಿದ್ದ. ಸ್ನಾನದ ಗೃಹಕ್ಕೆ ಕರೆದುಕೊಂಡು ಹೋಗಿ ಖಾಸಗಿ ಭಾಗ ಮುಟ್ಟುತ್ತಿದ್ದ. ಲೈಂಗಿಕ ಚಟುವಟಿಕೆ ನಡೆಸಲು ಒತ್ತಾಯಿಸುತ್ತಿದ್ದ. ವಿರೋಧಿಸಿದರೆ ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಿದ್ದಾರೆ.
ಸದ್ಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದ್ದು, ಐಪಿಎಸ್ ಅಧಿಕಾರಿ ದೀಪ್ತಿ ಗಾರ್ಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ವಿಚಾರಣೆ ನಡೆಸಲಾಗುತ್ತಿದೆ.








