ಬೆಂಗಳೂರಿನಲ್ಲಿ ಕೋರ್ಟ್ ನಿರ್ದೇಶನದಂತೆ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಅನಧಿಕೃತ ಫ್ಲೆಕ್ಸ್ ನಿರ್ಬಂಧ ಹೇರಲಾಗುವುದು ಎಂದು ಡಿಸಿಎ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕುಮಾರಕೃಪಾ ಅತಿಥಿಗೃಹದಲ್ಲಿ ಈ ಕುರಿತು ಮಾತನಾಡಿರುವ ಅವರು, ಈ ನಿರ್ಧಾರವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಒಂದು ವೇಳೆ ಅನಧಿಕೃತ ಫ್ಲೆಕ್ಸ್ ಹಾಕಿದರೆ ಅವರು ಯಾರೇ ಆದರೂ ಪಾಲಿಕೆ ಅಧಿಕಾರಿಗಳು ಎಫ್ಐಆರ್ ದಾಖಲಿಸಬೇಕು. ಒಂದು ಫ್ಲೆಕ್ಸ್ ಗೆ ತಲಾ 50 ಸಾವಿರ ದಂಡ ವಿಧಿಸಲಿದ್ದಾರೆ ಹೇಳಿದ್ದಾರೆ.
ಅನಧಿಕೃತ ಫ್ಲೆಕ್ಸ್ ತೆರವಿಗೆ ಕೋರ್ಟ್ ಮೂರು ವಾರಗಳ ಗಡವು ನೀಡಿದೆ. ನನ್ನದೂ, ಮುಖ್ಯಮಂತ್ರಿಗಳದ್ದೂ ಸೇರಿದಂತೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನ ಎಲ್ಲ ಅನಧಿಕೃತ ಫ್ಲೆಕ್ಸ್ ಗಳನ್ನು ನಿಷೇಧಿಸಲಾಗುವುದು. ಈ ವಿಚಾರವಾಗಿ ನಮ್ಮ ಸಚಿವರು ಹಾಗೂ ನಾಯಕರಿಗೆ ಮನವಿ ಮಾಡಿದ್ದೇನೆ. ಫ್ಲೆಕ್ಸ್ ನಿಷೇಧ ಕುರಿತು ಮುಂದಿನ ದಿನಗಳಲ್ಲಿ ನೀತಿ ರೂಪಿಸುತ್ತೇವೆ ಎಂದು ಹೇಳಿದ್ದಾರೆ.








