ಕೇಂದ್ರದ ಗುಜುರಿ ನೀತಿಯಿಂದ 50 ಸಾವಿರ ಉದ್ಯೋಗ ಸೃಷ್ಟಿ
ನವದೆಹಲಿ : ಕೇಂದ್ರ ಬಜೆಟ್ ನಲ್ಲಿ ಸ್ವಯಂ ಪ್ರೇರಿತ ಗುಜುರಿ ನೀತಿ ಜಾರಿಯ ಬಗ್ಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪ ಮಾಡಿದ್ದು, 20 ವರ್ಷ ಮೇಲ್ಪಟ್ಟ ಖಾಸಗಿ ವಾಹನ, ವಾಣಿಜ್ಯ ವಾಹನಗಳು ಪಿಟ್ ನೆಸ್ ಪರೀಕ್ಷೆಗೆ ಒಳಗಾಗಬೇಕು ಎಂದು ಹೇಳಿದ್ದರು.
ಇದೀಗ ಈ ಗುಜುರಿ ನೀತಿ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಪ್ರತಿಕ್ರಿಯೆ ನೀಡಿದ್ದು, ಇದರಿಂದ ಅಂದಾಜು 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಅವರು, ಗುಜುರಿ ನೀತಿಯನ್ನು ಸ್ವಾಗತಿಸಿದರು. ಇದರಿಂದ ಮುಂದಿನ ದಿನಗಳಲ್ಲಿ 50 ಸಾವಿರ ಉದ್ಯೋಗಗಳು ಸೃಷ್ಠಿಯಾಗಲಿವೆ.
ಅಲ್ಲದೆ ದೇಶದಲ್ಲಿ ಅಂದಾಜಿ 10 ಸಾವಿರ ಕೋಟಿ ರೂಪಾಯಿ ಹೂಡಿಕೆಯಾಗಿದೆ. ಇದರ ಬಗ್ಗೆ 15 ದಿನಗಳ ಒಳಗಡೆ ಸಮಗ್ರವಾದ ವಿವರ ಪ್ರಕಟಿಸುವುದಾಗಿ ತಿಳಿಸಿದರು.
ಇದಲ್ಲದೆ ಮೆಟಲ್ ತ್ಯಾಜ್ಯ ಮರುಬಳಕೆ, ಸುಧಾರಿತ ಸುರಕ್ಷತೆ, ವಾಯುಮಾಲಿನ್ಯ ಮತ್ತು ಇಂಧನ ಆಮದು ಕಡಿಮೆ ಮಾಡುವುದರ ಜೊತೆಗೆ ಹೂಡಿಕೆಯನ್ನು ಉತ್ತೇಜಿಸಲು ಈ ನೀತಿ ಸಹಾಯವಾಗಲಿದೆ ಎಂದು ನಿತಿನ್ ಗಡ್ಕರಿ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel