ಸ್ಯಾಂಟಿಯಾಗೊ: ಭೀಕರ ಕಾಡ್ಗಿಚ್ಚು ಹಬ್ಬಿ 51 ಜನ ಬಲಿಯಾಗಿರುವ ಘಟನೆ ನಡೆದಿದೆ. ಅಲ್ಲದೇ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಈ ಘಟನೆ ದಕ್ಷಿಣ ಅಮೆರಿಕದ ಚಿಲಿಯಲ್ಲಿ ನಡೆದಿದೆ.
ಮಧ್ಯ ಚಿಲಿಯ ಸುಮಾರು 10 ಲಕ್ಷ ನಿವಾಸಿಗಳು ವಾಸಿಸುವ ವಾಲ್ಪಾರೈಸೊ ಪ್ರದೇಶದ ಹಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಹಬ್ಬಿದೆ. ಅಗ್ನಿಶಾಮಕ ಸಿಬ್ಬಂದಿ ಹೆಲಿಕಾಪ್ಟರ್‌ಗಳು ಮತ್ತು ಟ್ರಕ್‌ಗಳನ್ನು ಬಳಸಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿವೆ.
ವಿನಾ ಡೆಲ್ ಮಾರ್ ಸುತ್ತಮುತ್ತಲಿನ ಪ್ರದೇಶಗಳು ಹೆಚ್ಚು ಹಾನಿಯಾಗಿವೆ. ದಶಕದಿಂದ ಚಿಲಿಯಲ್ಲಿ ಕಾಡ್ಗಿಚ್ಚಿನ ಪ್ರಮಾಣ ಏರಿಕೆಯಾಗುತ್ತಿದೆ. ದೇಶದ್ಯಾಂತ 92 ಕಡೆ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಿಂದ 43,000 ಹೆಕ್ಟೇರ್‌ಗೂ ಹೆಚ್ಚು ಪ್ರದೇಶಗಳಿಗೆ ಹಾನಿಯಾಗಿದೆ. ಇಲ್ಲಿ ಬೇಸಿಗೆಯಲ್ಲಿ ಕಾಡ್ಗಿಚ್ಚು ಸಾಮಾನ್ಯ. ಹಿಂದಿನ ವರ್ಷ ಕಾಡ್ಗಿಚ್ಚಿಗೆ ಸುಮಾರು 4 ಲಕ್ಷ ಹೆಕ್ಚೇರ್ ಪ್ರದೇಶಕ್ಕಿಂತಲೂ ಹೆಚ್ಚು ಕಾಡು ಹಾನಿಯಾಗಿ ಕನಿಷ್ಠ 27 ಜನರು ಸಾವನ್ನಪ್ಪಿದ್ದರು.








