ಮಂಡ್ಯ: ಜಿಲ್ಲೆಯ ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 52 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ (Judicial Custody) ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಸೆ. 11ರಂದು ರಾತ್ರಿ ಗಣೇಶ ಮೂರ್ತಿಯನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದರು. ಎರಡು ಗುಂಪುಗಳ ನಡುವಿನ ಘರ್ಷಣೆಯಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ತಡರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿ ಪರಿಸ್ಥಿತಿ ಹತೋಟಿಗೆ ತಂದಿದ್ದರು. ಸದ್ಯ ಪ್ರರಣಕ್ಕೆ ಸಂಬಂಧಿಸಿದಂತೆ 52 ಜನರನ್ನು ಬಂಧಿಸಲಾಗಿದೆ.
52 ಆರೋಪಿಗಳನ್ನು ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಬಳಿಕ ನ್ಯಾಯಾಧೀಶರ ಮುಂದೆ ಬಂಧಿತರನ್ನು ಪೊಲೀಸರು ಹಾಜರುಪಡಿಸಿದ್ದರು. ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.
ಬಂಧಿತರ ಪೈಕಿ 23 ಹಿಂದೂ ಹಾಗೂ 39 ಮುಸ್ಲಿಮರಿದ್ದಾರೆ. ಸದ್ಯ ಆರೋಪಿಗಳನ್ನು ನಾಗಮಂಗಲದಿಂದ ಮಂಡ್ಯ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಜೈಲುಸೇರಿದವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.