ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ, 50ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕಾಳಿಂದಿ ಕುಂಜ್ ಮೆಟ್ರೊ ನಿಲ್ದಾಣದ ಬಳಿ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. ರೋಹಿಂಗ್ಯಾ ನಿರಾಶ್ರಿತರ ಶಿಬಿರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಲ್ಲಿ 56 ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬoದಿದೆ.
ಶನಿವಾರ ತಡರಾತ್ರಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.. ಬೆಳಕಿನ ಜಾವ ಸುಮಾರು 3 ಗಂಟೆ ಹೊತ್ತಿಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ಧಾರೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ ರೋಹಿಂಗ್ಯಾ ನಿರಾಶ್ರಿತರ 270 ಕುಟುಂಬಗಳ ಪೈಕಿ 56 ಕುಟುಂಬಗಳ ಗುಡಿಸಲುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.