ನವದೆಹಲಿ : ದೇಶದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 22,68,676 ತಲುಪಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಾರ, ಕಳೆದ 24 ಗಂಟೆ ಅವಧಿಯಲ್ಲಿ 53,601 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 871 ಸಾವು ಸಂಭವಿಸಿದೆ. ಇದರೊಂದಿಗೆ, ಒಟ್ಟು ಸೋಂಕಿತರ ಸಂಖ್ಯೆ 22,68,676 ತಲುಪಿದೆ. ಈವರೆಗೆ ಒಟ್ಟು 45,257 ಮಂದಿ ಮೃತಪಟ್ಟಿದ್ದಾರೆ.
ದೇಶದ ಒಟ್ಟು 22,68,676 ಸೋಂಕಿತರ ಪೈಕಿ, 15,83,490 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 6,39,929 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ದೇಶದಲ್ಲಿ ಕೊರೊನಾ ಸಾವಿನ ಪ್ರಮಾಣ ಶೇ 1.99ರಷ್ಟಿದ್ದರೇ ಗುಣಮುಖರಾಗುತ್ತಿರುವವರ ಪ್ರಮಾಣ ಶೇ 69.80ರಷ್ಟಿದೆ. ಸಕ್ರಿಯ ಪ್ರಕರಣಗಳ ಪ್ರಮಾಣ ಶೇ 28.21ರಷ್ಟಿದೆ ಎಂದೂ ಸಚಿವಾಲಯ ತಿಳಿಸಿದೆ.







