ಚಿಕ್ಕಮಗಳೂರಿನಲ್ಲಿ ಕೊರೊನಾ ಸ್ಫೋಟ : 55 ಮಕ್ಕಳಿಗೆ ಸೋಂಕು
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸ್ಫೋಟವಾಗಿದ್ದು, 55 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಚಿಕ್ಕಮಗಳೂರಿನ ಕಲ್ಯಾಣ ನಗರದಲ್ಲಿರುವ ಅಂಬೇಡ್ಕರ್ ವಸತಿ ಶಾಲೆಯ 17 ಮಕ್ಕಳು ಹಾಗೂ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 38 ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
424 ಮಕ್ಕಳಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿದಾಗ 38 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಆದ್ರೆ ಈ ಮಕ್ಕಳಲ್ಲಿ ಯಾವುದೇ ರೋಗ ಲಕ್ಷಣಗಳು ಕಂಡಿಲ್ಲ.
ಸದ್ಯಕ್ಕೆ ಶಾಲೆಯನ್ನೇ ಸೀಲ್ಡೌನ್ಗೊಳಿಸಿರುವ ಜಿಲ್ಲಾಡಳಿತ ಪ್ರತ್ಯೇಕ ಐಸೋಲೇಶನ್ ಮೂಲಕ ಮಕ್ಕಳಿಗೆ ಚಿಕಿತ್ಸೆ ಮಂದುವರೆಸಿದ್ದು, ಇಬ್ಬರು ನರ್ಸ್ ಹಾಗೂ ಓರ್ವ ವೈದ್ಯರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.