ಬೆಳಗಾವಿ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಕೊಯ್ನಾ ಜಲಾಶಯದಿಂದ 55,486 ಕ್ಯೂಸೆಕ್ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇದರಿಂದ ಈಗಾಗಲೇ ಅಪಾಯಮಟ್ಟ ಮೀರಿ ಹರಿಯುತ್ತಿರುವ ಕೃಷ್ಣ ನದಿಗೆ ಮತ್ತಷ್ಟು ನೀರು ಹರಿದು ಬರಲಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಕೃಷ್ಣಾ ನದಿ ತೀರದ ಬಹುತೇಕ ಜನರು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಆಗಿದ್ದಾರೆ. ಇತ್ತ ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಮಳೆ ತಗ್ಗಿದ್ದು, ಜನ ಕೊಂಚ ನಿಟ್ಟುಸಿರುವ ಬಿಡುವಂತಾಗಿದೆ. ಆದರೂ ಕೊಯ್ನಾದಿಂದ ಬರುತ್ತಿರುವ ನೀರಿನಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.
ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ ಸಂಪೂರ್ಣ ಮುಳುಗಡೆಯಾಗಿದೆ. ಹಿರಣ್ಯಕೇಶಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಗೋಡಗೇರಿ- ನೊಗಿನಹಾಳ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಮುಳುಗಡೆಯಾಗಿದೆ.









