ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳು ಆರಂಭ ಹಿನ್ನೆಲೆಯಲ್ಲಿ ಈವರೆಗೆ 18 ಸಾವಿರ ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಅದರಲ್ಲಿ ಬೆಂಗಳೂರು ನಗರದ 57 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ವಿಶೇಷ ಹೆಲ್ತ್ ಕಮಿಷನರ್ ರಾಜೇಂದ್ರ ಚೋಳನ್ ಮಾಹಿತಿ ನೀಡಿದ್ದಾರೆ.
ಡಿಗ್ರಿ ಕಾಲೇಜುಗಳು ಆರಂಭವಾದ ಬೆನ್ನಲ್ಲೇ ಕೊರೊನಾ ಇದು ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಹೆಚ್ಚಿಸಿದೆ.ನವೆಂಬರ್ 17ರಿಂದ ಕಾಲೇಜುಗಳು ಆರಂಭಗೊಂಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯವಾಗಿದೆ. ಕಾಲೇಜುಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸೇಷನ್, ಮಾಸ್ಕ್ ಕಡ್ಡಾಯ ಸೇರಿದಂತೆ ಎಲ್ಲಾ ರೀತಿ ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇಷ್ಟೆಲ್ಲಾ ಮುಂಜಾಗ್ರತ ಕ್ರಮ ಕೈಗೊಂಡರೂ ಕೂಡ ವಿದ್ಯಾರ್ಥಿಗಳಲ್ಲಿ ಸೋಂಕು ದೃಢ ಪಟ್ಟಿರೋದು ಪೋಷಕರಲ್ಲಿ ಆತಂಕ ಸೃಷ್ಟಿಸಿದೆ

ಅಂತಿಮ ವರ್ಷದ ಪದವಿ ಕಾಲೇಜುಗಳ ಶಿಕ್ಷಕರು, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯು ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೊಳಪಡಿಸುವ ಸಲುವಾಗಿಯೇ ಮೊಬೈಲ್ ತಂಡಗಳನ್ನು ನಿಯೋಜಿಸಿದೆ.
ಪಾಲಿಕೆಯಿಂದ ನಿಯೋಜಿಸಲ್ಪಟ್ಟ ಮೊಬೈಲ್ ತಂಡಗಳು ಕಾಲೇಜುಗಳ ಬಳಿಯೇ ತೆರಳಿ ವಿದ್ಯಾರ್ಥಿಗಳಿಗೆ ಕೋವಿಡ್ ಪತ್ತೆ ಪರೀಕ್ಷೆ ಮಾಡುತ್ತಿವೆ. ನಗರದ 343 ಕಾಲೇಜುಗಳಲ್ಲಿಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿರುವ 81911 ವಿದ್ಯಾರ್ಥಿಗಳನ್ನು ಗುರುತಿಸಿದ್ದು, ಈವರೆಗೆ 30,032 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈ ಪೈಕಿ 57 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ನಗರದ ನಾನಾ ಕಾಲೇಜುಗಳ ಬಳಿ ಪಾಲಿಕೆಯ 176 ಮೊಬೈಲ್ ತಂಡಗಳು 10,807 ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿವೆ. ನ.17ರಂದು 11574 ಮತ್ತು ನ.18ರಂದು 7651 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








