ಕೊರೊನಾ ಭಯ : ಗ್ರಾಮದ ಸುತ್ತಲೂ ಮುಳ್ಳಿನ ಬೇಲಿ
ಹೊಸಪೇಟೆ : ತಾಲೂಕಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರು ಭೀತಗೊಂಡಿದ್ದಾರೆ.
ಈ ಮಧ್ಯೆ ಮರಿಯಮ್ಮನಹಳ್ಳಿ ಹೋಬಳಿಯ ಹಂಪನಕಟ್ಟೆ ಗ್ರಾಮಸ್ಥರು ಕೊರೊನಾ ಭೀತಿಯಿಂದ ಗ್ರಾಮದ ಸುತ್ತ ಮುಳ್ಳಿನ ಬೇಲಿ ಹಾಕಿಕೊಂಡಿದ್ದಾರೆ.
ಗ್ರಾಮಕ್ಕೆ ಹೊರಗಿನವರು ಒಳಗಡೆ ಬರದಂತೆ ಬೇಲಿ ಹಾಕಲಾಗಿದೆ. ಗ್ರಾಮದ ಸುತ್ತಲೂ ನಾಕಾ ಬಂಧಿ ಮಾಡಲಾಗಿದೆ. ಸ್ಥಳದಲ್ಲೇ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅವರು ಮೊಕ್ಕಾಂ ಹೂಡಿದ್ದಾರೆ.
ಈ ಗ್ರಾಮದಲ್ಲಿ ಒಂದೇ ದಿನ 57 ಕೊರೊನಾ ಪ್ರಕರಣ ಕಾಣಿಸಿಕೊಂಡಿದೆ. ಈ ಹಿನ್ನೆಲೆ ಊರಿನ ಜನರು ಗ್ರಾಮದ ಸುತ್ತಲೂ ಮುಳ್ಳಿನ ಬೇಲಿ ಅಳವಡಿಸಿಕೊಂಡಿದ್ದಾರೆ.