ರಾಜ್ಯದಲ್ಲಿ ಕೊರೊನಾ ಮರಣಕೇಕೆ : ಇಂದು ಒಂದೇ ದಿನ 586 ಸಾವು corona
ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಮರಣಕೇಕೆ ಹಾಕಿದ್ದು, ಒಂದೇ ದಿನ 586 ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ಇವತ್ತು ರಾಜ್ಯದಲ್ಲಿ 46 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 586 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ರಾಜ್ಯದಲ್ಲಿ 45 ಸಾವಿರಕ್ಕೂ ಹೆಚ್ಚು ಕೋವಿಡ್ ಕೇಸ್ ಗಳು ಪತ್ತೆಯಾಗಿವೆ. ಜೊತೆಗೆ 586 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.
ಇನ್ನು ಕೆಲವೇ ಕ್ಷಣದಲ್ಲಿ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆಯಾಗಲಿದೆ.