ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾದ ಆರೋಪಿಯಾಗಿರುವ ನಟಿ ಸಂಜನಾ ಗಲ್ರಾನಿಯನ್ನು 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.
ಸಂಜನಾ ಗಲ್ರಾನಿಯನ್ನು ಬಂಧಿಸಿದ ಬಳಿಕ ವಸಂತ ನಗರದ 8ನೇ ಎಸಿಸಿಎಂ ಕೋರ್ಟ್‍ಗೆ ಸಿಸಿಬಿ ಪೊಲೀಸರು ಹಾಜರುಪಡಿಸಿದ್ದರು. ಈ ವೇಳೆ ಸಂಜನಾಳನ್ನು 8 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದಾರೆ. ಆದರೆ, ಕೋರ್ಟ್ 5 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.
ಇದಕ್ಕೂ ಮೊದಲು ಸಂಜನಾಳನ್ನು ಅರೆಸ್ಟ್ ಮಾಡುತ್ತಿದ್ದಂತೆ ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಅಂಟಿಜೆನ್ ಟೆಸ್ಟ್‍ನಲ್ಲಿ ಸಂಜನಾಗೆ ಕೊರೊನಾ ನೆಗೆಟಿವ್ ಬಂದಿದೆ. ನಂತರ ವಸಂತನಗರದ 8ನೇ ಎಸಿಎಂಎಂ ಕೋರ್ಟ್‍ಗೆ ಹಾಜರುಪಡಿಸಲಾಯಿತು.
ನ್ಯಾಯಾಲಯ ಕಸ್ಟಡಿಗೆ ನೀಡುತ್ತಿದ್ದಂತೆ ಸಂಜನಾಳನ್ನು ಸಿಸಿಬಿ ಪೊಲೀಸರು ಮಡಿವಾಳದ ಮಹಿಳಾ ಸಾಂತ್ವನ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಲ್ಲೇ ಸಂಜನಾಳ ವಿಚಾರಣೆಯನ್ನು ಸಿಸಿಬಿ ಪೊಲೀಸರು ಮುಂದುವರೆಸಲಿದ್ದಾರೆ. ಮಹಿಳಾ ಸಾಂತ್ವನ ಕೇಂದ್ರದಲ್ಲಿ ಮತ್ತೊಬ್ಬ ಆರೋಪಿ ನಟಿ ರಾಗಿಣಿ ಕೂಡ ಇದ್ದು, ಒಂದೇ ಕೊಠಿಯಲ್ಲಿಯೋ ಅಥವಾ ಬೇರೆ ಕೊಠಡಿಯಲ್ಲಿ ಸಂಜನಾಳನ್ನು ಇರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
Astrology : 5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ…
5 ಕಂಟೈನರ್‌ಗಳನ್ನು ಎಂದಿಗೂ ಅಡಿಗೆ ಕೌಂಟರ್‌ನಲ್ಲಿ ಇರಿಸಬಾರದು. ಈ ಎಲ್ಲಾ ವಸ್ತುಗಳನ್ನು ಅಡುಗೆ ವೇದಿಕೆಯ ಮೇಲೆ ಇರಿಸಿದರೆ, ಹಣಕ್ಕೆ ಕಷ್ಟವಾಗುತ್ತದೆ... ನಮ್ಮ ಅಡುಗೆಮನೆಯಲ್ಲಿ ನೂರಾರು ವಸ್ತುಗಳು ಇವೆ....