ಬೆಂಗಳೂರು : 5 ಮತ್ತು 8 ನೇ ತರಗತಿ ಮಕ್ಕಳನ್ನು ಈ ಬಾರಿ ಫೇಲ್ ಮಾಡುವಂತಿಲ್ಲ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
5 ಹಾಗೂ 8ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಗ್ರೇಡ್ ನಿಗಿದ ಮಾಡಲಾಗಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ ಎಂಬ ಸೂಚನೆ ನೀಡಲಾಗಿದೆ.
ಮೌಲ್ಯಾಂಕನ ಪರೀಕ್ಷೆಗಳನ್ನು 40 ಅಂಕಗಳ ಲಿಖಿತ ಮೌಲ್ಯಂಕನ ಮತ್ತು ಶಾಲಾ ಹಂತದಲ್ಲಿ 10 ಅಂಕಗಳ ಮೌಖಿಕ ಮೌಲ್ಯಾಂಕ ನಡೆಸಲಾಗಿದೆ. 50 ಅಂಕಗಳಲ್ಲಿ ವಿದ್ಯಾರ್ಥಿ ಗಳಿಸಿದ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸಿ ಗ್ರೇಡ್ ನೀಡಲಾಗುತ್ತದೆ.
ಮಾರ್ಚ್ 27 ರಿಂದ ಏಪ್ರಿಲ್ 1 ರವರೆಗೆ ಶಾಲಾ ಹಂತದಲ್ಲಿ ಮೌಲ್ಯಂಕನ ನಡೆಸಲಾಗಿದ್ದು, ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡುವಂತಿಲ್ಲ . ಫಲಿತಾಂಶವನ್ನು ಸಂಬಂಧಿಸಿದ ವಿದ್ಯಾರ್ಥಿ ಹಾಗೂ ಪಾಲಕರಿಗೆ ಮಾತ್ರ ತಿಳಿಸಲಾಗುತ್ತಿದೆ.
–








