5ನೇ ಟೆಸ್ಟ್ ಪಂದ್ಯ : ಗಾಯದ ಸುಳಿಯಲ್ಲಿ ಟೀಂ ಇಂಡಿಯಾ
ಬೆಂಗಳೂರು : ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ, ಅಂತಿಮ ಹಾಗೂ ಐದನೇ ಟೆಸ್ಟ್ ಪಂದ್ಯಕ್ಕೆ ತಯಾರಿ ಆರಂಭಿಸಿದೆ. ಆದ್ರೆ ಕೊಹ್ಲಿ ಪಡೆಗೆ ಇದೀಗ ಗಾಯದ ಸಮಸ್ಯೆ ಎದುರಾಗಿದೆ.
ಟೀಮ್ ಇಂಡಿಯಾದ ಅನುಭವಿ ಬ್ಯಾಟ್ಸ್ಮನ್ಗಳಾದ ರೋಹಿತ್ ಶರ್ಮಾ ಮತ್ತು ಚೇತೇಶ್ವರ ಪೂಜಾರ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ.
ನಾಲ್ಕನೇ ಟೆಸ್ಟ್ ಪಂದ್ಯದ ದ್ವಿತೀಯ ಇನ್ನಿಂಗ್ಸ್ನಲ್ಲಿ ಆಂಗ್ಲರ ಮಾರಕ ಬೌಲಿಂಗ್ ದಾಳಿಯಿಂದಾಗಿ ಪೂಜಾರ ಮತ್ತು ರೋಹಿತ್ ಇಬ್ಬರಿಗೂ ಗಾಯವಾಗಿತ್ತು.
ರೋಹಿತ್ ತೊಡೆ ಭಾಗದಲ್ಲಿ ಚೆಂಡು ಬಡಿದ ಗುರುತುಗಳು ಕಾಣಿಸಿದ್ದವು. ಹೀಗಾಗಿ ಮುಂದಿನ ಪಂದ್ಯದಲ್ಲಿ ಅವರಿಬ್ಬರು ಆಡುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಅನುಮಾನ ಮೂಡಿದೆ. ಇತ್ತ ಚೇತೇಶ್ವರ ಪೂಜಾರಿ ಅವರಿಗೆ ನೀ ಇಂಜೂರಿಯಾಗಿದ್ದು, ಪಂದ್ಯದಿಂದ ದೂರ ಉಳಿಯುವ ಸಾಧ್ಯತೆಗಳಿವೆ.
ಇನ್ನು ನಾಳೆಯಿಂದ ಐದನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಉಭಯ ತಂಡಗಳಿಗೂ ಗೆಲುವು ಅನಿವಾರ್ಯವಾಗಿದೆ.