ಮುಂಬೈನಲ್ಲಿ ಮೊದಲೇ ಕೊರೊನಾ ಭೀಕರತೆಯಿಂದ ಜನರು ನಲುಗಿಹೋಗಿದ್ದಾರೆ. ಮತ್ತೊಂದೆಡೆ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ದಾರಾಕಾರ ಮಳೆಯಿಂದಾಗಿ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಧಾರಾಕಾರ ಮಳೆಗೆ ನಗರದಲ್ಲಿನ ೫ ಅಂತಸ್ತಿನ ಕಟ್ಟಡವೊಮದು ಕುಸಿದ ಪರಿನಾಮ ೬ ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಮಧ್ಯಾನದ ವೇಳೆಗೆ ಭಾನುಷಾಲಿ ಬ್ಯುಲ್ಡಿಂಗ್ ನಲ್ಲಿ ಈ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ದೌಡಾಯಿಸಿದ್ದ ಎನ್ ಡಿ ಆರ್ ಎಫ್ ತಂಡ ನಿರಂತರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಇದೀಗ ೬ ಜನರು ಮೃತಪಟ್ಟಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ತೀವ್ರವಾಗಿ ಗಾಯಗೊಮಡಿದ್ದ ಮೂವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸ್ತಳದಲ್ಲಿ ಅಗ್ನಿ ಸಾಮಕ ದಳ ವಾಹನಗಳು ಹಾಗೂ ಆಂಬ್ಯುಲೆನ್ಸ್ ಸಹ ಮೊಕ್ಕಾಂ ಹೂಡಿವೆ.
Astro-ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ
ಈಶ್ವರನ ಕೃಪೆಯಿಂದ ಇಂದು ಈ ರಾಶಿಯವರಿಗೆ ಸಿಗಲಿದೆ ಭಾರೀ ಯಶಸ್ಸು, ಎಚ್ಚರಿಕೆ ಇರಲಿ ಪಂಡಿತ್ ಜ್ಞಾನೇಶ್ವರ್ ರಾವ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ...








