ತಮಿಳುನಾಡಿನ ವಿದ್ಯುತ್ ಸ್ಥಾವರದ ಬಾಯ್ಲರ್ ಸ್ಫೋಟ; 6 ಕಾರ್ಮಿಕರ ಸಾವು

ಚೆನ್ನೈ: ಆಂಧ್ರ ಪ್ರದೇಶದ ಬಳಿಕ ಇದೀಗ ತಮಿಳುನಾಡಿನ ವಿದ್ಯುತ್ ಘಕಟವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, 6 ಕಾರ್ಮಿಕರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಂಭೀರ ಗಾಯಗಳಾಗಿವೆ.
ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿರುವ ನೈವೇಲಿ ಲಿಗ್ನೈಟ್ ಕಾರ್ಪೋರೇಶನ್ ಸೇರಿದ ವಿದ್ಯುತ್ ಉತ್ಪಾದನಾ ಘಟಕದ ಸ್ಟೇಜ್-2ನ ಬಾಯ್ಲರ್ ಸ್ಫೋಟಗೊಂಡಿದೆ.
ಬಾಯ್ಲರ್ ಸ್ಫೋಟದಲ್ಲಿ ಗಾಯಗೊಂಡ ಕಾರ್ಮಿಕರಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಗಾಯಾಳು ಕಾರ್ಮಿಕರನ್ನು ಲಿಗ್ನೈಟ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬಾಯ್ಲರ್ ಸ್ಫೋಟದ ತೀವ್ರತೆಗೆ ಬೆಂಕಿಯ ಕೆನ್ನಾಲಿಗೆ ಆಗಸದೆತ್ತರಕ್ಕೆ ಚಿಮ್ಮಿದೆ.

Leave a Reply

Your email address will not be published. Required fields are marked *

Recent Posts

YOU MUST READ

Pin It on Pinterest

Share This