ಜೈಪುರ: ಪ್ರಧಾನಿ ಮೋದಿ ಅವರ ಭದ್ರತೆಗೆ ತೆರಳುತ್ತಿದ್ದ 6 ಜನ ಪೊಲೀಸರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಟ್ರಕ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಚುನಾವಣಾ ರ್ಯಾಲಿಯ ಭದ್ರತೆಗೆ ನಿಯೋಜಿದ್ದ ಆರು ಜನ ಪೊಲೀಸರು (Police) ಸಾವನ್ನಪ್ಪಿದ್ದಾರೆ. ಈ ಘಠನೆ ರಾಜಸ್ಥಾನದ (Rajasthan) ಚುರು ಎಂಬಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 58ರಲ್ಲಿ ಈ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ 6 ಜನ ಪೊಲೀಸರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೂ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಸೂಕ್ತ ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ.
ಘಟನೆಗೆ ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ತೀವ್ರ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸುತ್ತೇನೆ ಎಂದು ಪ್ರಾರ್ಥಿಸಿದ್ದಾರೆ.