ಮುಂದಿನ 8 ವರ್ಷಗಳಲ್ಲಿ 6 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಟೂರ್ನಿಗಳು

1 min read

6 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ- ಇದು ಮುಂದಿನ 8 ವರ್ಷಗಳಲ್ಲಿ ಐಸಿಸಿ ಇವೆಂಟ್ಸ್…!
ಹಿಂದೆಲ್ಲಾ ಐಸಿಸಿ ಈವೆಂಟ್ಸ್ಗಳು ಅಪರೂಪಕ್ಕೆ ನಡೆಯುತ್ತಿದ್ದವು. ಆದರೆ ಈಗ ಅದರ ಸ್ವರೂಪ ಬದಲಾಗುತ್ತಿವೆ. ಮುಂದಿನ 8 ವರ್ಷಗಳಲ್ಲಿ 6 ವಿಶ್ವಕಪ್, 2 ಚಾಂಪಿಯನ್ಸ್ ಟ್ರೋಫಿ ಟೂರ್ನಿಗಳು ನಡೆಯಲಿವೆ. ಆತಿಥ್ಯ ನೀಡಲಿರುವ ದೇಶಗಳ ಪಟ್ಟಿಯನ್ನು ಕೂಡ ಐಸಿಸಿ ಪ್ರಕಟಿಸಿದೆ
ಚಾಂಪಿಯನ್ಸ್ ಟ್ರೋಫಿ ಮಾತ್ರ ಒಂದು ದೇಶಕ್ಕೆ ಆತಿಥ್ಯದ ಹೊಣೆ ನೀಡಲಾಗಿದೆ. ಇದನ್ನು ಬಿಟ್ಟರೆ ಐಸಿಸಿಯ ಎಲ್ಲಾ ಟೂರ್ನಿಗಳು ಜಂಟಿಯಾಗಿ ಆಯೋಜನೆಗೊಳ್ಳಲಿವೆ. 2022 ರ ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯಲಿದ್ದು, ಇದರ ಬಳಿಕ 2023 ರ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ.
Champions Trophy saaksha tv
2024 ರಿಂದ 2031 ರವರೆಗೆ ನಡೆಯಲಿರುವ ವಿಶ್ವಕಪ್ ಸೇರಿದಂತೆ ಪ್ರಮುಖ ಟೂರ್ನಿಗಳ ಆತಿಥೇಯ ರಾಷ್ಟ್ರಗಳ ಪಟ್ಟಿಯನ್ನು ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ ಬಿಡುಗಡೆ ಮಾಡಿದೆ. 2024-2031ರ ಅವಧಿಯಲ್ಲಿ ಒಟ್ಟು 8 ಟೂರ್ನಿಗಳು ನಡೆಯಲಿದ್ದು, ಅದರಲ್ಲಿ ಎರಡು ಏಕದಿನ ವಿಶ್ವಕಪ್, ನಾಲ್ಕು ಟಿ20 ವಿಶ್ವಕಪ್ ಹಾಗೂ ಎರಡು ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ.

2024 ರ ಟಿ20 ವಿಶ್ವಕಪ್ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಆಯೋಜನೆಯಾಗಲಿದೆ. 2025ರಲ್ಲಿ ಪಾಕಿಸ್ತಾನದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. 2026ರ ಟಿ20 ವಿಶ್ವಕಪ್ ಅನ್ನು ಶ್ರೀಲಂಕಾ ಹಾಗೂ ಭಾರತ ಜಂಟಿಯಾಗಿ ಆಯೋಜಿಸಲಿದೆ. 2027ರ ಏಕದಿನ ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಹಾಗೂ ನಮೀಬಿಯಾ ಜಂಟಿಯಾಗಿ ಆತಿಥ್ಯವಹಿಸಲಿದೆ.
2028ರ ಟಿ20 ವಿಶ್ವಕಪ್ ಅನ್ನು ನ್ಯೂಜಿಲೆಂಡ್ ಹಾಗೂ ಆಸ್ಟ್ರೇಲಿಯಾ ನಡೆಸಲಾಗುತ್ತದೆ. 2029ರ ಚಾಂಪಿಯನ್ಸ್ ಟ್ರೋಫಿ ಭಾರತದಲ್ಲಿ ನಡೆಯಲಿದ್ದು, 2030ರ ಟಿ20 ವಿಶ್ವಕಪ್ಗೆ ಇಂಗ್ಲೆಂಡ್-ಐರ್ಲೆಂಡ್-ಸ್ಕಾಟ್ಲೆಂಡ್ ಆತಿಥ್ಯವಹಿಸಲಿದೆ. ಅದೇ ರೀತಿ 2031 ಏಕದಿನ ವಿಶ್ವಕಪ್ ಅನ್ನು ಭಾರತ ಹಾಗೂ ಬಾಂಗ್ಲಾದೇಶದಲ್ಲಿ ನಡೆಸಲಾಗುತ್ತದೆ. ಈ ಮೂಲಕ ಐಸಿಸಿ ಮುಂದಿನ ಟೂರ್ನಿಗಳನ್ನು ನೆರೆಹೊರೆ ದೇಶಗಳಲ್ಲಿ ಜಂಟಿಯಾಗಿ ಆಯೋಜಿಸಲು ನಿರ್ಧರಿಸಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd