ಹಳ್ಳಿಗೆ ಕೊರೊನಾ ಕೊಳ್ಳಿ : ಒಂದೇ ಗ್ರಾಮದಲ್ಲಿ 60 ಮಂದಿಗೆ ಸೋಂಕು
ಚಿತ್ರದುರ್ಗ : ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಜನರು ಭಯಭೀತಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಕಾಲಗೆರೆ ಗ್ರಾಮ ಇದೀಗ ಕೊರೊನಾ ಹಾಟ್ ಸ್ಪಾಟ್ ಆಗಿದೆ.
ಈ ಗ್ರಾಮದಲ್ಲಿ 60 ಜನರಿಗೆ ಕೊರೊನಾ ಸೊಂಕು ದೃಢಪಟ್ಟಿದೆ.

ಸದ್ಯ ಇವರೆಲ್ಲರನ್ನೂ ಹೋಂ ಐಸೋಲೇಷನ್ ಮಾಡಲಾಗಿದೆ. ಇದರಿಂದಾಗಿ ಹಳ್ಳಿಯಲ್ಲಿ ಸೋಂಕು ಹೆಚ್ಚಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಹಳ್ಳಿಯಲ್ಲಿ ಸೋಂಕು ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಸೋಂಕಿತರ ಸಂಪರ್ಕದಲ್ಲಿದ್ದ 230 ಜನರಿಗೆ ಸ್ವಾಬ್ ಟೆಸ್ಟ್ ಮಾಡಿದ್ದು, ಫಲಿತಾಂಶ ಬರಬೇಕಿದೆ. ಸದ್ಯ ಗ್ರಾಮದಲ್ಲಿ ಆರೋಗ್ಯ ಇಲಾಖೆಯಿಂದ ಜನರಿಗೆ ಜಾಗೃತಿ ಮೂಡಿಸಲಾಗುತ್ತಿದೆ.








