ಬೆಂಗಳೂರು : ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿದ್ದ ಭಿಕ್ಷುನ ಬಳಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಪ್ರತಿದಿನ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಅಂಗವಿಕಲ ರಂಗಸ್ವಾಮಯ್ಯ ಬಳಿ ಹಣ ಪತ್ತೆಯಾಗಿದೆ. ರಂಗಸ್ವಾಮಯ್ಯ ಭಿಕ್ಷೆ ಬೇಡಿದ ಹಣ ಹಾಗೂ ಅಂಗವಿಕಲ ವೇತನವನ್ನೂ ಬಳಸದೆ ಹಣವನ್ನು ಕೂಡಿಟ್ಟಿದ್ದು, ಸುಮಾರು 60 ಸಾವಿರ ರೂ. ಗಂಟಿನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಹಲವು ತಿಂಗಳುಗಳಿಂದ ಸಾನ್ನವಿಲ್ಲದೇ ಕೊಳಕು, ಹರಿದ ಬಟ್ಟೆಯಲ್ಲಿಯೇ ಜೀವನ ನಡೆಸುತ್ತಿದ್ದ ರಂಗಸ್ವಾಮಿ ಬಳಿ ಇದ್ದ ಬಟ್ಟೆ ಗಂಟನ್ನು ಎಸೆಯುವ ಸಂದರ್ಭದಲ್ಲಿ ಹಣ ಪತ್ತೆಯಾಗಿದೆ. ಇಷ್ಟು ದಿನ ಗ್ರಾಮಸ್ಥರು ಆತನಿಗೆ ಊಟ ನೀಡುತ್ತಿದ್ದರು. ಸದ್ಯ ರಂಗಸ್ವಾಮಯ್ಯನ ಹಣವನ್ನು ಗ್ರಾಮಸ್ಥರು ಬ್ಯಾಂಕ್ ಖಾತೆಗೆ ಹಾಕುವ ಚಿಂತನೆ ನಡೆಸಿದ್ದಾರೆ. ಅಲ್ಲದೇ ಆತನನ್ನು ಅನಾಥಾಶ್ರಮಕ್ಕೆ ಸೇರಿಸುವ ಯೋಚನೆಯನ್ನು ಮಾಡಿದ್ದಾರೆ.









