ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62ರಷ್ಟು ಮಂದಿ ಲಸಿಕೆ ಪಡೆದಿದ್ದು, ಕೊಡಗು ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ವೀಡಿಯೋ ಸಂವಾದ ನಡೆದ ಬಳಿಕ ಸಚಿವರು ಮಾತನಾಡಿದ ಸುಧಾಕರ್, ಶೇ.62ರಷ್ಟು ಮಂದಿ ಸ್ವಯಂಪ್ರೇರಿತರಾಗಿ ಲಸಿಕೆ ಹಾಕಿಸಿಕೊಂಡಿದ್ದು, ಬಹಳ ಆಶಾದಾಯಕವಾಗಿದೆ. ಮೊದಲ ದಿನ 21,658 ಮಂದಿಗೆ ಲಸಿಕೆ ನೀಡಬೇಕೆಂದು ನಿಗದಿಯಾಗಿತ್ತು. ಈ ಪೈಕಿ 13,408 ಮಂದಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದರು. ಲಸಿಕೆ ಪಡೆದ ಯಾರಿಗೂ ಗಂಭೀರ ಸಮಸ್ಯೆ, ಅಡ್ಡ ಪರಿಣಾಮ ಕಂಡುಬಂದಿಲ್ಲ. ಚುಚ್ಚುಮದ್ದು ನೀಡಿದಾಗ ಕೆಲವರಿಗೆ ಊತ ಬಂದಿರಬಹುದು. ಆದರೆ ಅದು ಕೇವಲ ಅರ್ಧಗಂಟೆಯಲ್ಲಿ ಕಡಿಮೆಯಾಗಿ ಮನೆಗೆ ತೆರಳಿದ್ದಾರೆ ಎಂದರು.

ಸೋಮವಾರದಿಂದ ಮತ್ತೆ ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು. ಭಾನುವಾರ ಹೆಚ್ಚಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತದೆ. ನಾನು ನಾನಾ ಭಾಗಗಳಲ್ಲಿ ಸಂಚರಿಸಿ ಲಸಿಕೆ ಪಡೆಯುವಂತೆ ಉತ್ತೇಜಿಸಲಿದ್ದೇನೆ ಎಂದರು.
ಕೊಡಗು ಜಿಲ್ಲೆಯಲ್ಲಿ ಅತಿ ಹೆಚ್ಚು ಲಸಿಕೆ
ಇಂದು ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಂದರೆ 84% ಮಂದಿ ಲಸಿಕೆ ಪಡೆದಿದ್ದಾರೆ. ಉತ್ತರ ಕನ್ನಡದಲ್ಲಿ 80% ಆಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ಅಂದರೆ, 37% ಮಂದಿ ಲಸಿಕೆ ಪಡೆದಿದ್ದಾರೆ. ಈ ಜಿಲ್ಲೆಯಲ್ಲಿ 660 ಮಂದಿಗೆ ಲಸಿಕೆ ನೀಡುವ ಗುರಿ ಇದ್ದು, 223 ಮಂದಿ ಮಾತ್ರ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದು ವಿದ್ಯಾವಂತರ ಜಿಲ್ಲೆಯಾಗಿದ್ದು, ಹೆಚ್ಚಿನವರು ಲಸಿಕೆ ಪಡೆಯಬೇಕು ಎಂದು ಆರೋಗ್ಯ ಸಚಿವ ಸುಧಾಕರ್ ಮನವಿ ಮಾಡಿದ್ದಾರೆ.

ಬೆಂಗಳೂರು ನಗರದಲ್ಲಿ 53% ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ 65% ಪ್ರಮಾಣದಲ್ಲಿ ಲಸಿಕೆ ಹಾಕಿಸಿಕೊಳ್ಳಲಾಗಿದೆ. ಮಲ್ಲಸಂದ್ರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಡಿಮೆ ಪ್ರಮಾಣದಲ್ಲಿ 28% ಆಗಿದೆ ಎಂದು ತಿಳಿಸಿದರು. ಮೊದಲ ದಿನ ಲಸಿಕೆ ಪಡೆಯದವರು ಮುಂದಿನ ದಿನಗಳಲ್ಲಿ ಲಸಿಕೆ ಪಡೆಯಲಿದ್ದಾರೆ.
ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.
ರಾಜ್ಯದಲ್ಲಿ 7.43 ಲಕ್ಷ ಮಂದಿಯನ್ನು ಗುರುತಿಸಿದ್ದು, 8 ಲಕ್ಷ ಲಸಿಕೆ ಬಂದಿದೆ. ಇನ್ನೂ 8 ಲಕ್ಷ ಲಸಿಕೆ ಕಳುಹಿಸಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ. ಪೌರಕಾರ್ಮಿಕರೊಬ್ಬರಿಗೆ ಮೊದಲ ಲಸಿಕೆ ನೀಡುವ ಪ್ರಧಾನಿ ನರೇಂದ್ರ ಮೋದಿಯವರ ಪರಿಕಲ್ಪನೆ ಪ್ರತಿಪಕ್ಷಗಳಿಗೆ ಅರ್ಥವಾಗಿಲ್ಲ. ಆದರೆ ಸಾಮಾನ್ಯ ಜನರಿಗೆ ಅರ್ಥವಾಗಿದೆ ಎಂದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








