ಮಂಗಳೂರು : ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 62 ಮಂದಿಗೆ ಕ್ವಾರೆಂಟೈನ್ ಮಾಡಿರುವ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡುವಿನಲ್ಲಿ ನಡೆದಿದೆ. ಕೊರೊನಾ ಸೋಂಕಿತನ ಪ್ರಾಥಮಿಕ ಸಂಪರ್ಕ ಹೊಂದಿದ್ದ ವ್ಯಕ್ತಿ ಮದುವೆಯಲ್ಲಿ ಭಾಗವಹಿಸಿದ್ದ ಹಿನ್ನೆಲೆ ದ್ವಿತೀಯ ಸಂಪರ್ಕದ 62 ಮಂದಿಯನ್ನು ಹೋಂ ಕ್ವಾರೆಂಟೈನ್ ಮಾಡಲಾಗಿದೆ.
ಮಲೇಷಿಯಾದಿಂದ ಬಂದಿದ್ದ ವೈದ್ಯರೊಬ್ಬರಿಗೆ ಪಾಸಿಟಿವ್ ಕಾಣಿಸಿಕೊಂಡಿತ್ತು.ಮೇ.22ರಂದು ಮಲೇಷಿಯಾದಿಂದ ಬೆಂಗಳೂರಿಗೆ ಬಂದು ಸರ್ಕಾರಿ ಕ್ವಾರೆಂಟೈನ್ ಮುಗಿಸಿದ್ದವರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಮಂಗಳೂರಿಗೆ ಬಂದಿರುವಾಗ ಕೊರೊನಾ ಪರೀಕ್ಷೆ ವೇಳೆ ಪಾಸಿಟಿವ್ ಕಾಣಿಸಿಕೊಂಡಿದೆ. ಸೋಂಕಿತರು ಭಾನುವಾರ ಅರಂತೋಡುವಿನ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದರು. ಆ ಮನೆಯಲ್ಲಿ ವೈದ್ಯರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದ ವ್ಯಕ್ತಿ ಮದುವೆಯಲ್ಲಿ ಭಾಗಿಯಾದವರನ್ನು ಕ್ವಾರೆಂಟೈನ್ ಮಾಡಲಾಗಿದೆ.








