ಬೆಂಗಳೂರು: ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 63.5 ಲಕ್ಷ ರೂ. ಮೌಲ್ಯದ ಡೈಮಂಡ್ ಹಾಗೂ 9.2 ಲಕ್ಷ ರೂ. ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಧಿಕಾರಿಗಳು ವಶಕ್ಕ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿ ಬಂಧಿಸಲಾಗಿದೆ.
ಬೆಂಗಳೂರಿನ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಈ ಘಟನೆ ನಡೆದಿದೆ. ಇಂಡಿಗೋ ಫ್ಲೈಟ್ ನಲ್ಲಿ ಬ್ಯಾಂಕಾಕ್ ನಿಂದ ಬೆಂಗಳೂರಿಗೆ ಈ ವ್ಯಕ್ತಿ ಬಂದಿದ್ದ. ಈತನ ಬ್ಯಾಗ್ ಪರಿಶೀಲಿಸಿದಾಗ ಅಕ್ರಮವಾಗಿ 2,348 ಕ್ಯಾರೆಟ್ ನ ವಿವಿಧ ವೆರೈಟಿಗಳ ರೂಬಿ ಹಾಗೂ ಡೈಮಂಡ್ಸ್ ಗಳನ್ನು ಸಾಗಿಸುತ್ತಿರುವುದು ಗೊತ್ತಾಗಿದೆ.