ಗುಲಾಂ ನಬಿ ಆಜಾದ್ ಬೆಂಬಲಿಸಿ ಕಾಶ್ಮೀರದ 64 ಕಾಂಗ್ರೆಸ್ ನಾಯಕರ ರಾಜಿನಾಮೆ..
ಕಾಂಗ್ರೆಸ್ ಪಕ್ಷಕ್ಕೆ ಗುಲಾಂ ನಬಿ ಆಜಾದ್ ರಾಜೀನಾಮೆ ಬೆನ್ನಲ್ಲೆ ಜಮ್ಮು ಕಾಶ್ಮಿರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆ ಉಂಟಾಗಿದೆ. ಮ್ಮು ಮತ್ತು ಕಾಶ್ಮೀರದ ಮಾಜಿ ಉಪಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ 64 ಹಿರಿಯ ಕಾಂಗ್ರೆಸ್ ನಾಯಕರು ಗುಲಾಂ ನಬಿ ಆಜಾದ್ ಅವರನ್ನು ಬೆಂಬಲಿಸಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಾಮೂಹಿಕ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ತಾರಾ ಚಂದ್ ಮತ್ತು ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘರು ರಾಮ್ ಮಾಜಿ ಶಾಸಕ ಬಲ್ವಾನ್ ಸಿಂಗ್ ಮತ್ತು ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ತಮ್ಮ ಪಕ್ಷಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ನಮ್ಮ ನಾಯಕ ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಪಕ್ಷವು ತಳಮಟ್ಟದ ಕಾರ್ಯಕರ್ತರೊಂದಿಗೆ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಿದ್ದಕ್ಕೆ ಈ ಘೋಷಣೆ ನಮ್ಮ ಅನುಮೋದನೆಯಾಗಿದೆ ಎಂದು ಠಾಕೂರ್ ಬಲ್ವಾನ್ ಸಿಂಗ್ ಹೇಳಿದ್ದಾರೆ.








