ರಾಜ್ಯದಲ್ಲಿ ಇಂದು 664 ಕೊರೊನಾ ಕೇಸ್ ಪತ್ತೆ
ಬೆಂಗಳೂರು : ರಾಜ್ಯದಲ್ಲಿ ಇವತ್ತು ಹೊಸದಾಗಿ 664 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 29,77,889 ಕ್ಕೆ ಏರಿಕೆಯಾಗಿದೆ.
ಇವತ್ತು 711 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಾದ್ಯಂತ ಇನ್ನು ಒಟ್ಟು 12,301 ಸಕ್ರಿಯ ಪ್ರಕರಣಗಳಿವೆ.
ಈವರೆಗೂ 29,27,740 ಮಂದಿ ಹೆಮ್ಮಾರಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 196 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 3 ಜನ ಮರಣ ಹೊಂದಿದ್ದಾರೆ. 258 ಜನ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನುಳಿದಂತೆ ಹಾವೇರಿ, ರಾಮನಗರ ಮತ್ತು ವಿಜಯಪುರದಲ್ಲಿ ಕೇವಲ 1 ಪ್ರಕರಣಗಳು ದಾಖಲಾಗಿದೆ. ಬಳ್ಳಾರಿ 3, ಬೆಳಗಾವಿ 8, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 196,
ಚಾಮರಾಜನಗರ 5, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 13, ಚಿತ್ರದುರ್ಗ 12, ದಕ್ಷಿಣ ಕನ್ನಡ 76, ದಾವಣಗೆರೆ 4, ಧಾರವಾಡ 9, ಹಾಸನ 45, ಕೊಡಗು 52, ಕೋಲಾರ 13, ಕೊಪ್ಪಳ 2,
ಮಂಡ್ಯ 8, ಮೈಸೂರು 101, ಶಿವಮೊಗ್ಗ 11, ತುಮಕೂರು 18, ಉಡುಪಿ 33, ಉತ್ತರ ಕನ್ನಡ 43 ಮತ್ತು ಯಾದಗಿರಿಯಲ್ಲಿ 2 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.









