ರಾಜ್ಯದ ಹೊಸದಾಗಿ 667 ಕೊರೊನಾ ಪ್ರಕರಣಗಳು ಪತ್ತೆ – Saaksha Tv
ಬೆಂಗಳೂರು: ರಾಜ್ಯದಲ್ಲಿ ಬುಧವಾರ 667 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 39,38,699 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ ಶೇ 0.91 ರಷ್ಟಿದೆ. ಅಲ್ಲದೆ 1,674 ಸೋಂಕಿತರು ಗುಣಮುಖರಾಗಿದ್ದು, ಈ ತನಕ 38,89,418 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಸದ್ಯ 9,378 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ 21 ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ 39,866 ಏರಿಕೆ ಕಂಡಿದೆ. ಸಾವಿನ ಪ್ರಮಾಣ ಶೇ 3.14 ರಷ್ಟಿದೆ. ಇನ್ನೂ 72,915 ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ 368 ಮಂದಿಗೆ ಸೋಂಕು ದೃಢಪಟ್ಟಿದ್ದು, 17,77,093 ಕ್ಕೆ ಏರಿಕೆ ಆಗಿದೆ. 849 ಮಂದಿ ಡಿಸ್ಜಾರ್ಜ್ ಆಗಿದ್ದು, ಈ ತನಕ 17,55,476 ಡಿಸ್ಜಾರ್ಜ್ ಆಗಿದ್ದಾರೆ. 15 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 16,857 ಏರಿಕೆ ಕಂಡಿದೆ. ಸದ್ಯ 4,759 ಸಕ್ರಿಯ ಪ್ರಕರಣಗಳಿವೆ.









