66ನೇ ಕನ್ನಡ ರಾಜ್ಯೋತ್ಸವ | ಸಿಎಂ ಬೊಮ್ಮಾಯಿ, ಬಿಎಸ್ ವೈ ಶುಭಾಶಯ

1 min read
basavaraj-bommai saaksha tv

66ನೇ ಕನ್ನಡ ರಾಜ್ಯೋತ್ಸವ | ಸಿಎಂ ಬೊಮ್ಮಾಯಿ, ಬಿಎಸ್ ವೈ ಶುಭಾಶಯ

ಬೆಂಗಳೂರು : ಇಂದು ನಾಡಿನೆಲ್ಲೆಡೆ 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಸಹ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

“ನಾಡಿನ ಸಮಸ್ತ ಜನತೆಗೆ 66ನೇ ಕನ್ನಡ ರಾಜ್ಯೋತ್ಸವದ ಹೃತ್ಪೂರ್ವಕ ಶುಭಕಾಮನೆಗಳು. ನಾಡಿನ ಏಕತೆ, ಸ್ವಾಭಿಮಾನ, ಸಾಮರಸ್ಯ, ಸಹಬಾಳ್ವೆಯ ಸಂಕೇತವಾದ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆಯ ಆಚರಣೆ. ನಮ್ಮ ಕನ್ನಡದ ಅಸ್ಮಿತೆ ಸದಾ ಜಾಗೃತವಾಗಿರಲಿ, ಕನ್ನಡತನದ ಅಭಿಮಾನ ನಿರಂತರವಾಗಿರಲಿ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

Kannada Rajyotsava

ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ನಾಡು, ನುಡಿ, ಜನಪದ, ಇತಿಹಾಸ, ಪರಂಪರೆ, ಸಂಸ್ಕೃತಿಗಳನ್ನು ಉಳಿಸುವ, ಬೆಳೆಸುವ ದೃಢ ಸಂಕಲ್ಪ ನಮ್ಮದಾಗಿರಲಿ. ಸಮೃದ್ಧ, ಆರೋಗ್ಯಪೂರ್ಣ, ಪ್ರಗತಿಶೀಲ ನವಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ನಮ್ಮ ಕರ್ತವ್ಯಗಳನ್ನು ನಿರ್ವಹಿಸೋಣ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd