ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತ 6ನೇ ಪದಕ ಗೆದ್ದ ಸಾಧನೆ ಮಾಡಿದೆ.
ಚೊಚ್ಚಲ ಒಲಿಂಪಿಕ್ಸ್ ಆಡುತ್ತಿರುವ ಅಮನ್ ಸೆಹ್ರಾವತ್ ಪುರುಷರ 57 ಕೆಜಿ ತೂಕ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಕಂಚಿನ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ಪೋರ್ಟೊ ರಿಕೊ ಕುಸ್ತಿಪಟುವನ್ನು 13-5 ರಿಂದ ಏಕಪಕ್ಷೀಯವಾಗಿ ಸೋಲಿಸುವ ಮೂಲಕ ಅಮನ್ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ.
ಹೀಗಾಗಿ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಆರನೇ ಪದಕ ದಕ್ಕಿದೆ. ಒಟ್ಟಾರೆ, ಈ ಕ್ರೀಡಾಕೂಟದಲ್ಲಿ ಇದು ಭಾರತಕ್ಕೆ 5 ನೇ ಕಂಚಿನ ಪದಕವಾಗಿದ್ದರೆ, ಕುಸ್ತಿಯಲ್ಲಿ ಭಾರತಕ್ಕೆ ಸಿಕ್ಕ ಮೊದಲ ಪದಕವಾಗಿದೆ.