ಬಳ್ಳಾರಿಯಲ್ಲಿ ಭೀಕರ ಅಪಘಾತ : 2 ಸಾವು, 6 ಗಾಯ
ಬಳ್ಳಾರಿ : ಆಟೋ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಡ್ಡುಗ್ರಾಮದ ಬೈಪಾಸ್ ನಲ್ಲಿ ನಡೆದಿದೆ.
68 ವರ್ಷದ ವಡ್ಡು ಗ್ರಾಮದ ಅಗಸರ ಅಳ್ಳಪ್ಪ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸುರ್ಜಿತ್ ಸಿಂಗ್ ಮೃತ ದುರ್ದೈವಿಗಳಾಗಿದ್ದಾರೆ.
ಆಟೋ ಹಾಗೂ ಜೀಪ್ ಪರಸ್ಪರ ಡಿಕ್ಕಿ ಹೊಡೆದ ರಭಸಕ್ಕೆ ಜೀಪ್ ತೆರೆದ ಹೊಂಡದಲ್ಲಿ ಬಿದ್ದಿದೆ.
ಹೀಗಾಗಿ ಜೀಪ್ ನಲ್ಲಿದ್ದ ಅಗಸರ ಅಳ್ಳಪ್ಪ ಹಾಗೂ ಖಾಸಗಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುರ್ಜಿತ್ ಸಿಂಗ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇತ್ತ ಘಟನೆಯಲ್ಲಿ ಆಟೋದಲ್ಲಿದ್ದ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರನ್ನು ಸ್ಥಳೀಯರು ಬಳ್ಳಾರಿಯ ವಿಮ್ಸ್ ಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.









