ಮಂಗಳೂರು: ಕೊರೊನಾ ಹಾವಳಿ ನಡುವೆಯೇ ದೇಶಾದ್ಯಂತ ಸಂಭ್ರಮದಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ. ರಾಜ್ಯದ ಪ್ರತಿ ಜಿಲ್ಲೆ, ಹಳ್ಳಿ, ಗಲ್ಲಿ ಗಲ್ಲಿಗಳಲ್ಲೂ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಇನ್ನೂ ದಕ್ಷಿಣ ಕನ್ನಡ ಜಿಲ್ಲಾಡಳಿತವೂ ಸಹ ಸರಳವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದೆ.
ಮಂಗಳೂರು ನಗರದ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿಯವರು ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ಗೌರವ ವಂದನೆ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಬಿ.ಜೆ.ಪಿ ರಾಜ್ಯಾಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ, ನಗರ ಪೊಲೀಸ್ ಕಮೀಷನರ್ ವಿಕಾಶ್ ಕುಮಾರ್ ವಿಕಾಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು. ಆದರೆ ಕೊರೊನಾ ಹಾವಳಿ ಹಿನ್ನೆಲೆ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದೆ. ಆದರೆ ಸಾರ್ವಜನಿಕರಿಗಾಗಿ ಜಿಲ್ಲಾಡಳಿತದ ಅಧಿಕೃತ ಯೂಟ್ಯೂಬ್ ಚಾನಲ್ ಮೂಲಕ ನೇರಪ್ರಸಾರ ಮಾಡಲಾಗಿತ್ತು.








