750 ರೈತ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ : ತೆಲಂಗಾಣ ಸರ್ಕಾರ
ಹೈದರಾಬಾದ್ : ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ವಿವಾಧಿತ ಮೂರು ಕೃಷಿ ಕಾಯ್ದೆಗಳ ವಿರುದ್ಧದ ಹೋರಾಟದಲ್ಲಿ ಮಡಿದ 750 ರೈತ ಕುಟುಂಬಗಳಿಗೆ ತೆಲಂಗಾಣ ಸರ್ಕಾರ ಮೂರು ಲಕ್ಷ ರುಪಾಯಿ ಪರಿಹಾರ ಘೋಷಣೆ ಮಾಡಿದೆ.
ಕೃಷಿ ಕಾನೂನುಗಳನ್ನು ವಿರೋಧಿ 355 ದಿನಗಳ ಕಾಲ ರೈತರು ದೆಹಲಿ ಬಾರ್ಡರ್ ನಲ್ಲಿ ಪ್ರತಿಭಟನೆ ನಡೆಸಿದರು.
ಇದಕ್ಕೆ ಮಣಿದ ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ವಾಪಸ್ ಪಡೆಯೋದಾಗಿ ತಿಳಿಸಿದೆ.
ಆದ್ರೆ ವಿಪಕ್ಷಗಳು ಈ ಹೋರಾಟದಲ್ಲಿ ಮಡಿದ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸುತ್ತಿವೆ.
ಒಂದು ಲೆಕ್ಕದ ಪ್ರಕಾರ ಅನ್ನದಾತರ ಈ ಹೋರಾಟದಲ್ಲಿ ಸುಮಾರು 750ಕ್ಕೂ ಅಧಿಕ ರೈತರು ತಮ್ಮ ಪ್ರಾಣ ಕಳೆದುಕೊಂಡಿದ್ದಾಗಿ ತಿಳಿದು ಬಂದಿದೆ.
ಈ ರೈತರಿಗೆ ಪರಿಹಾರ ನೀಡಬೇಕೆಂದು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡದಾಗಿ ಧ್ವನಿ ಕೇಳುತ್ತಿದೆ.
ಆದ್ರೀಗ ತೆಲಂಗಾಣ ಸರ್ಕಾರ ಕೃಷಿ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಸಾವನ್ನಪ್ಪಿರುವ 750 ರೈತ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ತೆಲಂಗಾಣ ಸರ್ಕಾರ ಮೃತ ರೈತರ ಕುಟುಂಬಕ್ಕೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ನೀಡುವಂತೆ ಮನವಿ ಮಾಡಿದೆ.