75th independence day | ಈದ್ಗಾ ಮೈದಾನದಲ್ಲಿ ಹಾರಿದ ತಿರಂಗಾ
ಬೆಂಗಳೂರು : ದೇಶದೆಲ್ಲೆಡೆ 75ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದೆ.
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಎಸಿ ಶಿವಣ್ಣ ಧ್ವಜಾರೋಹಣ ನೆರವೇರಿಸಿದ್ದಾರೆ.
ಸ್ವಾತಂತ್ರ್ಯೋತ್ಸವ ದಿನಾಚರಣೆ ಹಿನ್ನಲೆಯಲ್ಲಿ ಈದ್ಗಾ ಮೈದಾನದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಆರ್.ಎ.ಎಫ್,ರ್ಯಾಪಿಡ್ ಫೋರ್ಸ್, ಡಿಸ್ವಾತ್ ಸೇರಿದಂತೆ 850 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.

ಮೈದಾನದ ಸುತ್ತಲೂ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿತ್ತು.
ಬೆಂಗಳೂರು ಉತ್ತರ ವಲಯದ ವಿಭಾಗಾಧಿಕಾರಿ ಎಂ.ಜಿ. ಶಿವಣ್ಣ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಖಾನ್, ಸಂಸದ ಪಿ.ಸಿ. ಮೋಹನ್ ಉಪಸ್ಥಿತರಿದ್ದರು.
ಧ್ವಜಾರೋಹಣ ನೆರವೇರಿಸಿದ ಬಳಿಕ ನಾಡಗೀತೆ ಹಾಡಲಾಯಿತು.
ಇದಾದ ಬಳಿಕ ಮಹಾತ್ಮಾ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.