75ನೇ ಸ್ವಾತಂತ್ರ್ಯ ದಿನ : ಚಿಕ್ಕಬಳ್ಳಾಪುರದಲ್ಲಿ ಸುಧಾಕರ್ ಧ್ವಜಾರೋಹಣ 75th Independence Day
ಚಿಕ್ಕಬಳ್ಳಾಪುರ : ಇಂದು ಭಾರತ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದೆ. ಎಲ್ಲೆಲ್ಲೂ ತಿರಂಗಾ ರಾರಾಜಿಸುತ್ತಿದ್ದು, ದೇಶದ ಎಲ್ಲ ಜನತೆ ಭಾರತಾಂಬೆಗೆ ಕೈಮುಗಿಯುತ್ತಿದ್ದಾರೆ.
ಅದರಂತೆ ಚಿಕ್ಕಬಳ್ಳಾಪುರದಲ್ಲೂ ಕೂಡ ಸ್ವಾತಂತ್ರ್ಯ ದಿನಾಚರಣೆ ಆಚರಣೆ ಮಾಡಲಾಗಿದೆ. ಆರೋಗ್ಯ ಮತ್ತುಅ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಚಿಕ್ಕಬಳ್ಳಾಪುರದದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ನಗರದ ಸರ್.ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿರುವ ಸಮಾರಂಭದಲ್ಲಿ ರಾಷ್ಟ್ರಧ್ವಜ ಹಾರಿಸಿದ ಸುಧಾಕರ್, ಬಳಿಕ ಗೌರವ ವಂದನೆ ಸ್ವೀಕರಿಸಿದರು.
ನಂತರ ಸ್ವಾತಂತ್ರ್ಯೊತ್ಸವ ಭಾಷಣ ಮಾಡಿ ಸರ್ವರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.









