ಸಿಂಪಲ್ ಸ್ಟಾರ್ ರಕ್ಷಿತ್ ನಟನೆಯ ಬಹುನಿರೀಕ್ಷಿತ 777 ಚಾರ್ಲಿ ಸಿನಿಮಾ ರಿಲೀಸ್ ಗೆ ಡೇಟ್ ಅನೌನ್ಸ್ ಮಾಡುವ ಮೂಲಕ ಅಭಿಮಾನಿಗಳಿಗೆ ಚಿತ್ರತಂಡ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.. ಅಂದ್ಹಾಗೆ ಈ ಸಿನಿಮಾ ಇದೇ ಜೂನ್ 10ಕ್ಕೆ ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ.. ಕಾಣುತ್ತಿದೆ.
ಕಿರಣ್ ರಾಜ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ಧಾರೆ.. ಸಿನಿಮಾದಲ್ಲಿ ಶ್ವಾನ ಮತ್ತು ಮನುಷ್ಯನ ಸಂಬಂಧದ ಬಗ್ಗೆ ತೋರಿಸಲಾಗುತ್ತಿದೆ.. ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಗೆ ನಾಯಕಿಯಾಗಿ ಸಂಗೀತ ಶೃಂಗೇರಿ ನಟಿಸಿದ್ದಾರೆ.
ಅಅವನೇ ಶ್ರೀಮನ್ನಾರಾಯಣ ಸಿನಿಮಾದ ನಂತರ ಸತತ ಮೂರು ವರ್ಷಗಳ ನಂತರ ರಕ್ಷಿತ್ ಶೆಟ್ಟಿ ಅವರ ಸಿನಿಮಾ ತೆರೆಕಾಣುತ್ತಿದ್ದು ಅಭಿಮಾನಿಗಳ ಕಾತರತೆ ಹೆಚ್ಚಾಗಿದೆ.. ಅಂದ್ಹಾಗೆ ಈ ಸಿನಿಮಾದಲ್ಲಿ ಗರುಡ ಗಮನ ವೃಷಭ ವಾಹನ ಸಿನಿಮಾ ಖ್ಯಾತಿಯ ರಾಜಜ್ ಬಿ ಶೆಟ್ಟಿ , ಫ್ರೆಂಚ್ ಬಿರಿಯಾನಿ ಖ್ಯಾತಿಯ ದಾನಿಷ್ ಶೇಠ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಅಂದ್ಹಾಗೆ 777 ಚಾರ್ಲಿ ಸಿನಿಮಾ ಕನ್ನಡ ಮಾತ್ರವಲ್ಲದೇ ಹಿಂದಿ, ತೆಲುಗು, ಮಲಯಾಳಂನಲ್ಲಿ ತೆರೆ ಕಾಣುತ್ತಿದೆ.