‘777 ಚಾರ್ಲಿ’ ಟ್ರೇಲರ್ ಬಿಡುಗಡೆ ಡೇಟ್ ರಿವೀಲ್..!
ಸ್ಯಾಂಡಲ್ ವುಡ್ ನಲ್ಲಿ ಬಹುನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರುವ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾದ ಟ್ರೇಲರ್ ರಿಲೀಸ್ ಡೇಟ್ ರಿವೀಲ್ ಆಗಿದೆ.. ಜೂನ್ 6 ರಂದು ಟ್ರೇಲರ್ ರಿಲೀಸ್ ಆಗ್ತಿದ್ದು, ಒಟ್ಟು 5 ಬಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ. ಸಿನಿಮಾದ ಟ್ರೇಲರ್‌ಗೆ ‘ಲೈಫ್ ಆಫ್ ಚಾರ್ಲಿ’ ಎಂದು ಹೆಸರಿಡಲಾಗಿದೆ.
ಸಿನಿಮಾದ ಫೊಸ್ಟರ್ ಈಗಾಗಲೇ ಬಿಡುಗಡೆ ಆಗಿದೆ. ಪೋಸ್ಟರ್‌ನಲ್ಲಿ ರಕ್ಷಿತ್ ಶೆಟ್ಟಿ ಮುದ್ದಾದ ನಾಯಿಯೊಂದಿಗೆ ಕಾಣಿಸಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಹಾಗೂ ನಾಯಿ ನಡುವಿನ ಬಂಧ, ಆತ್ಮೀಯತೆ ಸಿನಿಮಾದ ಪ್ರಮುಖ ಅಂಶವಾಗಿರಲಿದೆ ಎಂಬುದು ಪೋಸ್ಟರ್‌ಗಳಿಂದ ಗೊತ್ತಾಗುತ್ತಿದೆ.
ಕೊರೊನಾ ಲಾಕ್‌ಡೌನ್ ಕಾರಣದಿಂದಾಗಿ ಚಿತ್ರೀಕರಣ ತಡವಾಗಿದೆ. ಸಿನಿಮಾದ ಶೂಟಿಂಗ್ ಕಾಶ್ಮೀರ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ನಡೆಸಲಾಗಿದೆ. ಜೂನ್ 6 ರಂದು ಬಿಡುಗಡೆ ಆಗುವ ಟ್ರೇಲರ್‌ನಲ್ಲಿಯೇ ಸಿನಿಮಾದ ಬಿಡುಗಡೆ ದಿನಾಂಕವನ್ನೂ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.