ಡಿ. 31 ಕ್ಕೆ ರಿಲೀಸ್ ಆಗ್ತಿಲ್ಲ `777 ಚಾರ್ಲಿ’ ಸಿನಿಮಾ.. 777 Charlie’s saaksha tv
ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ 777 ಚಾರ್ಲಿ. ಚಿತ್ರದ ಪೋಸ್ಟರ್.. ಟೀಸರ್.. ಸಾಂಗ್ಸ್ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆದಿರುವ ಚಾರ್ಲಿ ಸಿನಿಮಾವನ್ನು ಕಣ್ತುಂಬಿಕೊಳ್ಳಲು ರಕ್ಷಿತ್ ಅಭಿಮಾನಿಗಳು ಕಾಯುತ್ತಿದ್ದಾರೆ. ಆದ್ರೆ ಇದೀಗ ಚಾರ್ಲಿ ಚಿತ್ರ ರಕ್ಷಿತ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ವೊಂದನ್ನ ನೀಡಿದೆ.
ಪ್ಯಾನ್ ಇಂಡಿಯಾ ಸಿನಿಮಾವಾಗಿ ಭಾರಿ ಹೈಪ್ ಕ್ರಿಯೇಟ್ ಮಾಡಿರುವ 777 ಚಾರ್ಲಿ, ಈ ತಿಂಗಳ ಅಂತ್ಯಕ್ಕೆ ತೆರೆಕಾಣಬೇಕಿತ್ತು. ಆದ್ರೆ ಇದೀಗ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ ಹೋಗಿದೆ.
ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ಟಿ ಈ ಕುರಿತು ಟ್ವೀಟ್ ಮಾಡಿದ್ದು, ಟ್ವೀಟ್ ನಲ್ಲಿ ‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ.
ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.
ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ.
ಕೆಲವು ವಿಳಂಬಗಳು ಹೊಸದೊಂದು ಅಧ್ಯಾಯಕ್ಕೆ ನಾಂದಿಯಾಗುತ್ತದೆ. ಅತೀ ಶೀಘ್ರದಲ್ಲಿ ಹೊಸ ಪ್ರಕಟಣೆಯೊಂದಿಗೆ ನಿಮ್ಮ ಮುಂದೆ ಬರಲಿದ್ದೇವೆ. ಅಲ್ಲಿಯವರೆಗೂ, ಹರಸಿ.. ಹಾರೈಸಿ’ ಎಂದು ತಿಳಿಸಿದ್ದಾರೆ.
ಇನ್ನು ‘777 ಚಾರ್ಲಿ’ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲೂ ಬಿಡುಗಡೆ ಆಗಲಿದೆ.
‘777 ಚಾರ್ಲಿ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್ ಬಿ. ಶೆಟ್ಟಿ, ದಾನಿಶ್ ಸೇಟ್ ಸೇರಿ ಹಲವು ಕಲಾವದರು ನಟಿಸಿದ್ದು, ಕಿರಣ್ ರಾಜ್ ಸಿನಿಮಾವನ್ನು ನಿರ್ದೇಶನ ಮಾಡಿದ್ಧಾರೆ.