ವಿಧಾನಸಭೆ: ರಾಜ್ಯ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯ ನಂತರ ಸಹಕಾರಿ ಸಂಘಗಳ ತಿದ್ದುಪಡಿ ವಿಧೇಯಕ-2024 ಅಂಗೀಕಾರವಾಗಿದೆ.
ಈ ಮೂಲಕ ಸಹಕಾರಿ ಸಂಘಗಳಲ್ಲಿ ನಾಮನಿರ್ದೇಶನಗಳ ಸಂಖ್ಯೆ ಮೂರಕ್ಕೆ ಹೆಚ್ಚಳವಾಗಿದೆ. ಅನಗತ್ಯ ವೆಚ್ಚ ಕಡಿತಕ್ಕಾಗಿ ಸಹಕಾರ ಚುನಾವಣಾ ಪ್ರಾಧಿಕಾರ ರದ್ದು, ಪ್ರಾಥಮಿಕ, ಮಾಧ್ಯಮಿಕ, ಫೆಡರಲ್ ಹಾಗೂ ಅಪೆಕ್ಸ್ ಬ್ಯಾಂಕ್ಗಳಲ್ಲಿ ಪ್ರಾತಿನಿಧ್ಯ ಇಲ್ಲದ ವರ್ಗಗಳಿಗೆ ಪ್ರಾತಿನಿಧ್ಯತೆ ಒದಗಿಸುವ ಉದ್ದೇಶವನ್ನು ಹೊಂದಲಾಗಿದೆ.
ಅಲ್ಲದೇ, ಅಧಿವೇಶನದಲ್ಲಿ ಬಿಬಿಎಂಪಿ ವಿಧೇಯಕ, ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ, ಘಾಟಿ ಸುಬ್ರಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಹುಲಿಗೆಮ್ಮ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರ್ ಗಳ ವಿಧೇಯಕ, ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ವಿಧೇಯಕ ಮಂಡನೆಯಾಗಿವೆ.