ಬೆಂಗಳೂರು : ಆಗಸ್ಟ್ 5 ರಂದು ನಡೆಯಲಿರುವ ರಾಮಮಂದಿರ ಭೂಮಿ ಪೂಜೆಗೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ವಿವಿಧ ರಾಜ್ಯಗಳಿಂದ ಹಲವು ಗಣ್ಯರನ್ನು ಆಹ್ವಾನಿಸಲಾಗಿದೆ. ಅದರಂತೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ನಮ್ಮ ರಾಜ್ಯದ ಎಂಟು ಗಣ್ಯರಿಗೆ ವಿಶೇಷ ಆಹ್ವಾನ ನೀಡಲಾಗಿದೆ.
1.ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ
2.ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ
3.ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ
4.ಶೃಂಗೇರಿ ಮಠದ ವಿಧುಶೇಖರ ಭಾರತೀ ಸ್ವಾಮೀಜಿ
5.ಸುತ್ತೂರು ಮಠದ ಶ್ರೀಗಳು
6.ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ
7.ಇಸ್ಕಾನ್ ನ ಮಧುಪಂಡಿತ ದಾಸ್
8.ಆರ್ಟ್ ಆಫ್ ಲಿವಿಂಗ್ ರವಿಶಂಕರ್ ಗುರೂಜಿ