ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಿಂದಾಗಿ 8 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಕೋಲ್ಕತಾದಿಂದ 30 ಕಿಲೋಮೀಟರ್ ದೂರದಲ್ಲಿರುವ ನಿಲ್ಜುಂಗ್ ಮೋಶ್ಪೋಲ್ನಲ್ಲಿನ ಮನೆಯನ್ನೇ ಕಾರ್ಖಾನೆಯಂತೆ ಪರಿವರ್ತಿಸಲಾಗಿತ್ತು. ಇಲ್ಲಿ ಪಟಾಕಿಗಳನ್ನು ಉತ್ಪಾದಿಸಿ ಸಂಗ್ರಹಿಸಲಾಗಿತ್ತು. ಅಲ್ಲದೇ, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅಗ್ನಿ ಶಾಮಕ ದಳ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, 5 ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಗ್ನಿಶಾಮಕ ಅಧಿಕಾರಿ ಆಶಿಷ್ ಘೋಷ್ ಅವರು ಮಾಹಿತಿ ನೀಡಿದ್ದಾರೆ.