ಸಿಗರೇಟ್ ಸೇದಲು ಹೊತ್ತಿಸಿದ್ದ ಬೆಂಕಿಯ ಕಿಡಿಯಿಂದಾಗಿ ಸಿಲಿಂಡರ್ ಸ್ಫೋಟಗೊಂಡು 8 ಜನ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿಹಳ್ಳಿಯಲ್ಲಿ ನಡೆದಿದೆ.
ಕೋಣೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಈ ದುರ್ಘಟನೆ ನಡೆದಿದೆ. ಈಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಬಿಹಾರ ಮೂಲದ ಸುಮಯ್ ಗುಪ್ತಾ, ತಿಲಕ್ ರಾಮ, ಸನೋಜ್ ಶರ್ಮಾ, ನೀರಜ್ ಭಾರತಿ, ಚಂದ್ರಪಾಲ್, ಲಕ್ಷಣ, ನಿಕೋನ್ ಅನ್ಸಾರಿ, ಅಮಿತ್ ಕುಮಾರ್ ಸಾವನ್ನಪ್ಪಿದ್ದಾರೆ. ಇವರೆಲ್ಲ ಬಿಹಾರನಿಂದ ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಆಗಮಿಸಿದ್ದು, ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಒಂದೇ ರೂಮ್ ನಲ್ಲಿ ವಾಸಿಸುತ್ತಿದ್ದರು.
ಆದರೇ, ಇದರಲ್ಲಿದ್ದ ವ್ಯಕ್ತಿಯೊಬ್ಬ ಸಿಗರೇಟ್ ಸೇದಲು ಬೆಂಕಿ ಹಚ್ಚಿದಾಗ ಇಡೀ ರೂಮ್ ಸ್ಫೋಟಗೊಂಡಿದೆ. ಘಟನೆ ಕುರಿತಂತೆ ಮಾಹಿತಿ ನೀಡಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಸಿಲಿಂಡರ್ ಪೈಪ್ ಒಡೆದು ಗ್ಯಾಸ್ ಸೋರಿಕೆಯಾಗಿ, ಸ್ಫೋಟಗೊಂಡಿದೆ. ರೂಮ್ ನಲ್ಲಿ ಮಲಗಿದ್ದ ಎಂಟು ಮಂದಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಎಲ್ಲರೂ ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.
ಅಲ್ಲದೇ, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಅನುಗೊಂಡನಹಳ್ಳಿ ಪೊಲೀಸರು, ಇಬ್ಬರನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.








