ರಾಜ್ಯದ ಜನತೆ ಸೂರಿನ ಭಾಗ್ಯ : ಸಂಪುಟ ಸಭೆಯಲ್ಲಿ ನಿರ್ಧಾರ

1 min read

ರಾಜ್ಯದ ಜನತೆ ಸೂರಿನ ಭಾಗ್ಯ : ಸಂಪುಟ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ಮುಂದಿನ ಎರಡು ವರ್ಷದಲ್ಲಿ 8 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮತ್ತು ನಗರ ಪ್ರದೇಶಗಳಲ್ಲಿ 1 ಲಕ್ಷ ಮನೆ ನಿರ್ಮಾಣ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಗೊಂದಲದ ನಡುವೆಯೂ ಇಂದು ಸಚಿವ ಸಂಪುಟ ಸಭೆ ನಡೆಯಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹಸಚಿವ ಬಸವರಾಜ್ ಬೊಮ್ಮಾಯಿ, ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮತ್ತು ನಗರ ಪ್ರದೇಶದಲ್ಲಿ 1 ಲಕ್ಷ ಮನೆ ನಿರ್ಮಾಣಕ್ಕೆ ತೀರ್ಮಾನ ಮಾಡಲಾಗಿದೆ.

ಬೆಂಗಳೂರಲ್ಲಿ 1 ಲಕ್ಷ ಬಹುಮಹಡಿ ಕಟ್ಟಡ ನಿರ್ಮಾಣ ಯೋಜನೆಯಡಿ ಮೂಲಭೂತ ಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ.ಗೆ ಅನುಮೋದನೆ ನೀಡಲಾಗಿದೆ ಎಂದರು.

karnataka Saaksha tv

ಇದಲ್ಲದೆ ರಾಜ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳಲ್ಲಿನ ಕ್ಯಾಂಪಸ್‍ಗಳಲ್ಲಿ ಅತ್ಯಾಧುನಿಕ ಕೃಷಿ ತಂತ್ರಜ್ಞಾನದ ಆವಿಷ್ಕಾರ ಹಾಗೂ ಅಭಿವೃದ್ಧಿ ಕೇಂದ್ರಗಳನ್ನು 770 ಕೋಟಿ ರೂ. ಅಂದಾಜು ಮೊತ್ತದಲ್ಲಿ 3 ವರ್ಷಗಳ ಅವಧಿಗೆ ಸ್ಥಾಪಿಸಲು ಅನುಮೋದನೆ.

ಮಣ್ಣಿನಲ್ಲಿ ಸಾವಯವ ಇಂಗಾಲ ಹೆಚ್ಚಿಸುವ ಅಭಿಯಾನ- ನೂತನ ಯೋಜನೆ 75 ಕೋಟಿ ರೂ. ಅಂದಾಜಿನಲ್ಲಿ ಮುಂದಿನ 5 ವರ್ಷಗಳಲ್ಲಿ ಅನುಷ್ಠಾನಗೊಳಿಸಲು ಅನುಮೋದನೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd