ನವದೆಹಲಿ : ಭಾರತದಲ್ಲಿ ಲಾಕ್ ಡೌನ್ ಸಡಿಲಿಕೆ ಬಳಿಕ ಕೊರೊನಾ ಆರ್ಭಟ ಜೋರಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ 8 ಸಾವಿರಕ್ಕಿಂತ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಅದರಂತೆ ನಿನ್ನೆ ಒಂದೇ ದಿನದಲ್ಲಿ 8,171 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2 ಲಕ್ಷದ ಸಮೀಪಕ್ಕೆ ಬಂದು ನಿಂತಿದ್ದು, ಇದುವರೆಗೂ ಒಟ್ಟು ಸೋಂಕಿತರ ಸಂಖ್ಯೆ 1,98,706ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 204 ಸೋಂಕಿತರು ಮೃತಪಟ್ಟಿದ್ದು, 3,707 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಒಟ್ಟಾರೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,98,706 ಏರಿಕೆಯಾಗಿದ್ದು, ಇದರಲ್ಲಿ 97,581 ಸಕ್ರಿಯ ಪ್ರಕರಣಗಳಾಗಿವೆ. ಇನ್ನು ಈವರೆಗೆ 95,527 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5,598 ಮಂದಿ ಕೊರೊನಾಸುರನಿಗೆ ಬಲಿಯಾಗಿದ್ದಾರೆ.







